ತುಮಕೂರು :ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 35ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರು ತಾಲೂಕು ಉಡಿಗೆರೆ ಬಳಿಯ ವದೇಕಲ್ಲು ಮತ್ತು ಪೆಮ್ಮನಹಳ್ಳಿ ಗ್ರಾಮದ ಬಳಿ ನಡೆದಿದೆ.
35 ಮಂದಿಯ ಪೈಕಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಇದು ಗೋಲ್ಡನ್ ಸಿಮ್ಸ್ ಫ್ಯಾಕ್ಟರಿಗೆ ಸೇರಿದ ಬಸ್ ಆಗಿದ್ದು, ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.