ತುಮಕೂರು:ಪಿಎಸ್ಐ ಪರೀಕ್ಷೆಯಲ್ಲಿನ ಅಕ್ರಮದ ಕುರಿತು ಕಠಿಣ ಕ್ರಮವನ್ನು ಭಾರತೀಯ ಜನತಾ ಪಕ್ಷ ತೆಗೆದುಕೊಂಡಿದೆ. ಕಠಿಣ ಕ್ರಮವನ್ನು ತೆಗೆದುಕೊಂಡರೆ ಅದು ಹೇಗೆ ಅಪರಾಧವಾಗುತ್ತದೆ. ಕ್ರಮ ತೆಗೆದುಕೊಳ್ಳದಿದ್ದರೆ ತಪ್ಪಾಗುತ್ತಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಅಕ್ರಮದ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಹಾಗೂ ಅದನ್ನು ಮುಚ್ಚಿಹಾಕಿದ್ದರೆ ಅದು ಅಪರಾಧವಾಗುತ್ತಿತ್ತು. ಅಕ್ರಮ ಬೆಳಕಿಗೆ ಬಂದ ತಕ್ಷಣ ಅದರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ, ಅದನ್ನು ಮುಚ್ಚಿ ಹಾಕಿಲ್ಲ. ವ್ಯವಸ್ಥೆಯಲ್ಲಿ ಭ್ರಷ್ಟಾಚಾರವನ್ನು ಬಿತ್ತಿದ್ದು, ಬೆಳೆಸಿದ್ದು ಕಾಂಗ್ರೆಸ್ ಪಕ್ಷವಾಗಿದೆ ಎಂದು ಆರೋಪಿಸಿದರು.