ಕರ್ನಾಟಕ

karnataka

ETV Bharat / city

ದರೋಡೆಕೋರರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಕೆಳಗೆ ಬಿದ್ದು ಮಹಿಳೆ ಸಾವು - ಕುಣಿಗಲ್ ತಾಲೂಕಿನ ಮೇದರದೊಡ್ಡಿ ಗ್ರಾಮ

ಮಾಂಗಲ್ಯ ಸರ ಅಪಹರಿಸಲು ಬಂದ ದರೋಡೆಕೋರರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಮಹಿಳೆಯೊಬ್ಬರು ಆಯ ತಪ್ಪಿ ಬೈಕ್​​​​​​​​​​ನಿಂದ ಕೆಳಗಿ ಬಿದ್ದು ಮೃತಪಟ್ಟಿರುವ ಘಟನೆ ಕುಣಿಗಲ್ ತಾಲೂಕಿನ ಮೇದರ ದೊಡ್ಡಿ ಗ್ರಾಮದ ಬಳಿ ನಡೆದಿದೆ.

tumkur
ದರೋಡೆಕೋರರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಕೆಳಗೆ ಬಿದ್ದು ಮಹಿಳೆ ಸಾವು

By

Published : Jun 15, 2021, 10:29 AM IST

ತುಮಕೂರು: ದ್ವಿಚಕ್ರ ವಾಹನದ ಹಿಂಬದಿ ಕುಳಿತು ತೆರಳುತ್ತಿದ್ದ ಮಹಿಳೆ ಮಾಂಗಲ್ಯ ಸರ ಅಪಹರಿಸಲು ಬಂದ ದರೋಡೆಕೋರರಿಂದ ತಪ್ಪಿಸಿಕೊಳ್ಳಲು ಹೋಗಿ ಆಯ ತಪ್ಪಿ ಕೆಳಗಿ ಬಿದ್ದು ಮೃತಪಟ್ಟಿರುವ ಘಟನೆ ಕುಣಿಗಲ್ ತಾಲೂಕಿನ ಮೇದರದೊಡ್ಡಿ ಗ್ರಾಮದ ಬಳಿ ನಡೆದಿದೆ.

ವಸಂತ (37) ಮೃತ ದುದೈವಿ. ಕುಣಿಗಲ್ ತಾಲೂಕಿನ ಹಂಗರಹಳ್ಳಿಯ ವಾಸಿಯಾಗಿರುವ ವಸಂತ, ಲಾಕ್​ಡೌನ್ ಸಡಿಲಿಕೆಯಾದ ಹಿನ್ನೆಲೆಯಲ್ಲಿ ತಮ್ಮ ತವರು ಮನೆಯಿಂದ ಚನ್ನಪಟ್ಟಣ ತಾಲೂಕಿನ ನಾಗವಾರ ಗ್ರಾಮಮದಲ್ಲಿರುವ ಪತಿಯ ಮನೆಗೆ ಮಗನೊಂದಿಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್​ ಹಿಂಬಾಲಿಸಿಕೊಂಡ ಬಂದ ದುಷ್ಕರ್ಮಿಗಳು, ಮೇದರದೊಡ್ಡಿ ಗ್ರಾಮದ ಸಮೀಪ ವಸಂತ ಅವರ ಕುತ್ತಿಗೆಗೆ ಕೈ ಹಾಕಿ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಹಿಳೆ ಆಯ ತಪ್ಪಿ ಕೆಳಗೆ ಬಿದ್ದಿದ್ದು, ತಲೆಯಲ್ಲಿ ಅಧಿಕ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಹುಲಿಯೂರು ದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಒಂದೇ ತಿಂಗಳಲ್ಲಿ ತಾಯಿ-ಮಗ-ಮಗಳು ಕೊರೊನಾಗೆ ಬಲಿ: 80 ಲಕ್ಷ ರೂ. ಖರ್ಚು ಮಾಡಿದ್ರೂ ಉಳಿಯಲಿಲ್ಲ!

ABOUT THE AUTHOR

...view details