ಕರ್ನಾಟಕ

karnataka

ETV Bharat / city

'ಮಕ್ಕಳಿಗೆ ಬಾಲ್ಯದಲ್ಲೇ ಸಿಗಲಿ ಭಾರತೀಯ ಧಾರ್ಮಿಕ ಸಂಸ್ಕೃತಿಯ ಪಾಠ' - ಭಾರತೀಯ ಧಾರ್ಮಿಕ ಸಂಸ್ಕೃತಿ

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ಮಕ್ಕಳಿಗೆ ಬಾಲ್ಯದಲ್ಲೇ ಭಾರತೀಯ ಧಾರ್ಮಿಕ ಸಂಸ್ಕೃತಿಯ ಪಾಠವನ್ನು ಹೇಳಿಕೊಟ್ಟರೆ ಅವರ ಮನಸ್ಸಲ್ಲಿ ಅಚ್ಚಳಿಯದೆ ಉಳಿಯುತ್ತದೆ ಎಂದು ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

Shree Veerabhadra Shivacharya swamiji talked
ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.

By

Published : May 24, 2022, 9:47 AM IST

ತುಮಕೂರು:ಪಠ್ಯಪುಸ್ತಕಗಳಲ್ಲಿ ನಮ್ಮ ದೇಶದ ಸಂಸ್ಕೃತಿಯನ್ನು ಅಳವಡಿಸುವ ಕೆಲಸವಾಗಬೇಕು. ಆ ಮೂಲಕ ಭಾರತೀಯ ಧಾರ್ಮಿಕ ಸಂಸ್ಕೃತಿಯನ್ನು ಮಕ್ಕಳಿಗೆ ಬಾಲ್ಯದಲ್ಲಿಯೇ ಕಲಿಸಿಕೊಡಬೇಕು. ಅದು ಅವರ ಜೀವನದಲ್ಲಿ ಶಾಶ್ವತವಾಗಿರುತ್ತದೆ ಎಂದು ಸಿದ್ದರಬೆಟ್ಟದ ರಂಭಾಪುರಿ ಶಾಖಾಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಪಠ್ಯಪುಸ್ತಕಗಳಲ್ಲಿ ಇತಿಹಾಸವನ್ನು ತಿಳಿಸುವ ಭರದಲ್ಲಿ ಅನೇಕ ವಾದ-ವಿವಾದಗಳು ನಡೆಯುತ್ತಿದೆ. ಈ ನಡುವೆ ನಮ್ಮ ಮಕ್ಕಳಿಗೆ ಭಾರತೀಯ ಧರ್ಮ, ಧಾರ್ಮಿಕ ಸಂಸ್ಕೃತಿಯನ್ನು ತಿಳಿಸುವ ನಿಟ್ಟಿನಲ್ಲಿಯೂ ಕೂಡ ಪಠ್ಯಪುಸ್ತಕ ಸಮಿತಿ ಮತ್ತು ಸರ್ಕಾರ ಚಿಂತನೆ ನಡೆಸಬೇಕು ಎಂದರು.


ಇದನ್ನೂ ಓದಿ:ಪಠ್ಯಪುಸ್ತಕ ಪರಿಷ್ಕರಣೆ ಹಿಂಪಡೆದು, ಹಿಂದಿನ ಪುಸ್ತಕಗಳನ್ನೇ ಆದಷ್ಟು ಬೇಗ ನೀಡಿ: ಪೋಷಕರು, ಶಿಕ್ಷಣ ತಜ್ಞರ ಆಗ್ರಹ

ABOUT THE AUTHOR

...view details