ತುಮಕೂರು:ಶಿರಾ ವಿಧಾನಸಭಾ ಉಪಚುನಾವಣೆ ಪ್ರಚಾರಕ್ಕೆ ವಿಜಯೇಂದ್ರ ಬಂದ ನಂತರ ಮುನ್ನಡೆ ಸಾಧಿಸುತ್ತಿದ್ದೇವೆ ಎಂದು ಸಿಎಂ ಹೇಳಿರುವುದು ಅನೇಕ ದಿನಗಳಿಂದ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಬಿಜೆಪಿಯ ತಳಸಮುದಾಯದ ಮುಖಂಡರನ್ನು ಅವಮಾನಿಸಿದಂತಾಗಿದೆ ಎಂದು ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಆರೋಪಿಸಿದ್ದಾರೆ.
ಯಡಿಯೂರಪ್ಪ ಬಿಜೆಪಿಯ ತಳಸಮುದಾಯದ ಮುಖಂಡರನ್ನು ಅವಮಾನಿಸಿದ್ದಾರೆ: ಕೆ ಎನ್ರಾಜಣ್ಣ - ತುಮಕೂರು ಲೇಟೆಸ್ಟ್ ನ್ಯೂಸ್
ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ದಿನಗಳಿಂದ ಕೆಲಸ ಮಾಡುತ್ತಿರುವ ಬಿಜೆಪಿಯ ತಳಮುದಾಯದ ಮುಖಂಡರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವಮಾನಿಸಿದ್ದಾರೆ..
ಯಡಿಯೂರಪ್ಪ ಬಿಜೆಪಿಯ ತಳಸಮುದಾಯದ ಮುಖಂಡರನ್ನು ಅವಮಾನಿಸಿದ್ದಾರೆ: ಕೆ.ಎನ್.ರಾಜಣ್ಣ ಆರೋಪ
ಶಿರಾದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾ ವಿಧಾನಸಭಾ ಉಪಚುನಾವಣೆ ಪ್ರಚಾರಕ್ಕೆ ವಿಜಯೇಂದ್ರ ಬಂದ ನಂತರ ಮುನ್ನಡೆ ಸಾಧಿಸುತ್ತಿದ್ದೇವೆ ಎಂದು ಸಿಎಂ ಹೇಳಿದ್ದಾರೆ.
ಹಾಗಾದರೆ, ನಿರಂತರವಾಗಿ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿರುವ ಆರ್.ಅಶೋಕ್, ಗೋವಿಂದ ಕಾರಜೋಳ, ಶ್ರೀರಾಮುಲು ಅವರಿಗೆ ಕಿಮ್ಮತ್ತು ಇಲ್ಲವೇ ಎಂದು ಪ್ರಶ್ನಿಸಿದರು. ಈ ರೀತಿ ತಳಸಮುದಾಯದವರನ್ನು ಅವಹೇಳನಕಾರಿಯಾಗಿ ನಡೆಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆಯನ್ನು ಗಮನಿಸಬೇಕಿದೆ ಎಂದು ತಿಳಿಸಿದರು.