ತುಮಕೂರು:ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥ್ ನಾರಾಯಣ ಅವರು ಅಸಾಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಟೌನ್ಹಾಲ್ ಮುಂದೆ ಪ್ರತಿಭಟನೆ ನಡೆಸಿದರು.
ಇದೇ ವೇಳೆ ಸಚಿವರಿಗೆ ಎಳ್ಳು-ಬೆಲ್ಲವನ್ನು ಕಳುಹಿಸಿ 'ಒಳ್ಳೆಯ ಮಾತನಾಡಿ' ಎಂದು ಘೋಷಣೆ ಕೂಗಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಸಿಗರು ಎಳ್ಳು- ಬೆಲ್ಲದ ಪ್ಯಾಕೆಟ್ಗಳನ್ನು ಕೈಯಲ್ಲಿ ಹಿಡಿದು ಧಿಕ್ಕಾರ ಕೂಗಿದ್ದು, ಬಿಜೆಪಿ ಮುಖಂಡರು ಸಂಸ್ಕೃತಿಯನ್ನು ಕಲಿಯಬೇಕು ಎಂದು ಒತ್ತಾಯಿಸಿದರು.