ತುಮಕೂರು: ಕೆಲ ದಿನಗಳ ಹಿಂದೆ ಕೊರೊನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಕುಟುಂಬಸ್ಥರಿಬ್ಬರಿಗೆ ಸೋಂಕು ತಗುಲಿದ್ದು, ಚಿಕಿತ್ಸೆಗೆ ತೆರಳಲು ಹಿಂದೇಟು ಹಾಕಿದ ಘಟನೆ ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೂಕ್ತ ಚಿಕಿತ್ಸೆ ದೊರೆಯದೆ ಸೋಂಕಿತ ಸಾವು: ಕುಟುಂಬಕ್ಕೆ ಕೊರೊನಾ ಬಂದ್ರು ಆಸ್ಪತ್ರೆಗೆ ತೆರಳಲು ಹಿಂದೇಟು
ಕೊರೊನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಕುಟುಂಬದ ಇಬ್ಬರಿಗೆ ಸೋಂಕು ತಗುಲಿದ್ದು, ಆಸ್ಪತ್ರೆಗೆ ತೆರಳಲು ಅವರು ಹಿಂದೇಟು ಹಾಕಿದ ಘಟನೆ ತುಮಕೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಜರುಗಿದೆ. ಕುಟುಂಬಸ್ಥರು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಂದಿಹಳ್ಳಿ ಗ್ರಾಮದ 64 ವರ್ಷದ ವ್ಯಕ್ತಿಯೋರ್ವನಿಗೆ ಕಳೆದ ಮೂರು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಆದ್ರೆ ಆ ವ್ಯಕ್ತಿಯ ಕುಟುಂಬಸ್ಥರು ಜಿಲ್ಲಾ ಕೋವಿಡ್ ಆಸ್ಪತ್ರೆಯ ವೈದ್ಯರು ಸರಿಯಾದ ಚಿಕಿತ್ಸೆ ನೀಡದ ಕಾರಣ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದರು.
ಸದ್ಯ ಕುಟುಂಬದ 55 ವರ್ಷದ ಹಾಗೂ 29 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಅವರನ್ನು ಚಿಕಿತ್ಸೆಗಾಗಿ ಕರೆದುಕೊಂಡು ಹೋಗಲು ಬಂದ ವೇಳೆ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಕಕ್ಕಾಬಿಕ್ಕಿಯಾದ ಸಿಬ್ಬಂದಿ ಸಾಕಷ್ಟು ಮನವರಿಕೆ ಮಾಡಿದರು ಕುಟುಂಬದವರು ಇದಕ್ಕೆ ಒಪ್ಪಲಿಲ್ಲ. ಅಲ್ಲದೆ ಜಿಲ್ಲಾಡಳಿತದ ವಿರುದ್ಧವೇ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.