ಕರ್ನಾಟಕ

karnataka

ETV Bharat / city

ಎಸ್ಎಸ್ಎಲ್​ಸಿ ವಿದ್ಯಾರ್ಥಿಗೆ ಕೊರೊನಾ: ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಜಿಲ್ಲಾಡಳಿತ - tumkur news

ಆಂಧ್ರ ಪ್ರದೇಶದ ರಾಯದುರ್ಗದಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ತುಮಕೂರು ಜಿಲ್ಲೆಯ ಶಿರಾಗೆ ಬಂದಿದ್ದ ಓರ್ವ ವಿದ್ಯಾರ್ಥಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

Corona infection for SSLC student in tumkur
ಎಸ್ಎಸ್ಎಲ್​ಸಿ ವಿದ್ಯಾರ್ಥಿಗೆ ಕೊರೊನಾ ಸೋಂಕು..ಪರೀಕ್ಷೆ ಬರೆಯಲು ಅವಕಾಶ ನೀಡದ ಜಿಲ್ಲಾಡಳಿತ

By

Published : Jun 25, 2020, 9:00 PM IST

ತುಮಕೂರು:ಆಂಧ್ರ ಪ್ರದೇಶದ ರಾಯದುರ್ಗದಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ಜಿಲ್ಲೆಯ ಶಿರಾಗೆ ಬಂದಿದ್ದ ಓರ್ವ ವಿದ್ಯಾರ್ಥಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.

ಎಸ್ಎಸ್ಎಲ್​ಸಿ ವಿದ್ಯಾರ್ಥಿಗೆ ಕೊರೊನಾ ಸೋಂಕು: ಪರೀಕ್ಷೆ ಬರೆಯಲು ಅವಕಾಶ ನೀಡದ ಜಿಲ್ಲಾಡಳಿತ

ಜೂನ್ 22ರಂದು ತನ್ನ ತಂದೆಯೊಂದಿಗೆ ವಿದ್ಯಾರ್ಥಿ ಶಿರಾಗೆ ಬಂದಿದ್ದ. ಅಲ್ಲದೆ ಜೂ. 24ರಂದು ಬೆಳಿಗ್ಗೆ ವಿದ್ಯಾರ್ಥಿಯ ತಾಯಿಗೆ ರಾಯದುರ್ಗದಲ್ಲಿ ಸೋಂಕು ಇರುವುದು ದೃಢವಾಗಿತ್ತು. ಈ ಹಿನ್ನೆಲೆ ಶಿರಾಗೆ ಬಂದಿದ್ದ ವಿದ್ಯಾರ್ಥಿಯ ಗಂಟಲು ದ್ರವ ಪರೀಕ್ಷೆ ನಡೆಸಿ, ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ವಿದ್ಯಾರ್ಥಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್​ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.

ಸೋಂಕಿತ ವಿದ್ಯಾರ್ಥಿಗೆ ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿಲ್ಲ. ಮುಂದಿನ ದಿನಗಳಲ್ಲಿ ಫ್ರೆಶ್ ಕ್ಯಾಂಡಿಡೇಟ್ ಎಂದು ಪರಿಗಣಿಸಿ, ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವುದಾಗಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ. ವಿದ್ಯಾರ್ಥಿಯ ತಂದೆಯನ್ನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಐವರನ್ನ ಕ್ವಾರಂಟೈನ್​ ಮಾಡಲಾಗಿದೆ. ಅಲ್ಲದೆ ಪಟ್ಟನಾಯಕನಹಳ್ಳಿಯನ್ನ ಕಂಟೈನ್ಮೆಂಟ್ ಝೋನ್​ ಎಂದು ಪರಿಗಣಿಸಿ, ಸೀಲ್ ​ಡೌನ್ ಮಾಡಲಾಗಿದೆ.

ABOUT THE AUTHOR

...view details