ಕರ್ನಾಟಕ

karnataka

ETV Bharat / city

ತುಮಕೂರು: ನರ್ಸಿಂಗ್​ ಕಾಲೇಜ್​​ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ - ನರ್ಸಿಂಗ್​ ಕಾಲೇಜ್​​ ವಿದ್ಯಾರ್ಥಿಗಳಿಗೆ ಕೊರೊನಾ

ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಸೊಂಕಿತರ ಸಂಪರ್ಕಕ್ಕೆ ಬಂದಿದ್ದ, ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

13861765
ಕೊರೊನಾ ಪರೀಕ್ಷೆ

By

Published : Dec 9, 2021, 7:01 PM IST

ತುಮಕೂರು:ನಗರದ ವಿವಿಧ ನರ್ಸಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ, ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಸೋಂಕು ಪರೀಕ್ಷೆ ಕಾರ್ಯ ನಡೆಯುತ್ತಿದೆ.

ಖಾಸಗಿ ನರ್ಸಿಂಗ್ ಕಾಲೇಜಿನ ಕೇರಳ ಮೂಲದ ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿರುವ ಎಲ್ಲ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಪಟ್ಟಣದ ಸಿದ್ಧಗಂಗಾ ಹಾಗೂ ವರದರಾಜ ನರ್ಸಿಂಗ್ ಕಾಲೇಜಿನ ಒಟ್ಟು 15 ಮಂದಿ ಕೇರಳ ಮೂಲದ ವಿದ್ಯಾರ್ಥಿಗಳಿಗೆ ಕಳೆದ ವಾರ ಕೋವಿಡ್ ಸೋಂಕು ದೃಢಪಟ್ಟಿತ್ತು. ಈ ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷಿಸಲಾಗಿ 1 ಅಥವಾ 2 ಪ್ರಕರಣಗಳು ಮಾತ್ರ ವರದಿಯಾಗಿದೆ. ಜಿಲ್ಲೆಯಲ್ಲಿ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದಿದೆ.

ಸೋಂಕು ಹರಡುವಿಕೆ ನಿಯಂತ್ರಣದಲ್ಲಿದ್ದರೂ ಸಹ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಂಡು, ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಮುನ್ನೆಚ್ಚರಿಕೆ ವಹಿಸುವುದನ್ನು ಮರೆಯಬಾರದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ABOUT THE AUTHOR

...view details