ತುಮಕೂರು: ಕೊವೀಡ್-19 ಸೋಂಕು ಹೆಚ್ಚಾಗುತ್ತಿದ್ದು, ತುಮಕೂರು ಜಿಲ್ಲೆಯಲ್ಲಿ 165 ಮಂದಿಯ ತಪಾಸಣೆ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ ತಿಳಿಸಿದ್ದಾರೆ.
ತುಮಕೂರಲ್ಲಿ 165 ಮಂದಿ ಕೊರೊನಾ ಶಂಕಿತರ ವರದಿಗಾಗಿ ನಿರೀಕ್ಷೆ - ತುಮಕೂರು ಜಿಲ್ಲೆಯಲ್ಲಿ 556 ಜನರ ಗಂಟಲು ದ್ರವ ಮಾದರಿ ತಪಾಸಣೆ
ತುಮಕೂರು ಜಿಲ್ಲೆಯಲ್ಲಿ 556 ಜನರ ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 384 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿವೆ. 165 ಮಂದಿಯ ತಪಾಸಣೆ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 480 ಮಂದಿಯ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಈ ಪೈಕಿ 49 ಮಂದಿಯನ್ನು ಹೋಂ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರ ಬರಬಾರದೆಂದು ಸೂಚಿಸಲಾಗಿದೆ. ಒಟ್ಟು 274 ಮಂದಿಯನ್ನು ಐಸೋಲೇಷನ್ನಲ್ಲಿ ಇಡಲಾಗಿದ್ದು, 321 ಜನರ 28 ದಿನಗಳ ಹೋಂ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದೆ.
ಈವರೆಗೆ 556 ಜನರ ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 384 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿವೆ. 2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ. 5 ಮಾದರಿಗಳು ತಿರಸ್ಕೃತಗೊಂಡಿವೆ.