ತುಮಕೂರು: ಕೋವಿಡ್ ಲಸಿಕೆ (COVID Vaccine) ಹಾಕಿಸಿಕೊಳ್ಳದ ಸಾರ್ವಜನಿಕರ ಮನೆಗಳಿಗೆ ಮೂಲಸೌಲಭ್ಯವನ್ನು ಅಧಿಕಾರಿಗಳು ಕಡಿತಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಜಿಲ್ಲೆಯ ಪಾವಗಡ ಪಟ್ಟಣದ ಕನುಮಲಚೆರವು ಬಡಾವಣೆಯಲ್ಲಿ ನೀರು ಮತ್ತು ವಿದ್ಯುತ್ ಅನ್ನು ಸ್ಥಗಿತಗೊಳಿಸುತ್ತಿರುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಗರಂ ಆಗಿದ್ದಾರೆ. 40ಕ್ಕೂ ಹೆಚ್ಚು ಮನೆಗಳ 100ಕ್ಕೂ ಹೆಚ್ಚು ಮಂದಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ನಿರಾಕರಿಸಿದ್ದರಿಂದ ಪುರಸಭೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ನೀರು ಮತ್ತು ವಿದ್ಯುತ್ ಅನ್ನು ಸ್ಥಗಿತಗೊಳಿಸಿದ್ದಾರೆಂದು ಹೇಳಲಾಗುತ್ತಿದೆ.