ತುಮಕೂರು:ರಾಜ್ಯಸಭಾ ಚುನಾವಣೆಗೆ ಸ್ಪಷ್ಟವಾಗಿ ಹೆಸರುಗಳನ್ನು ಅಂತಿಮಗೊಳಿಸಿ ಕಳಿಸಲಾಗಿದೆ. ಎಲ್ಲರ ಒಮ್ಮತದಿಂದ ಹೆಸರುಗಳನ್ನು ಸೂಚಿಸಲಾಗಿದೆ. ಎಲ್ಲಾ ಸಮುದಾಯಗಳನ್ನು ಗಮನದಲ್ಲಿಟ್ಟುಕೊಂಡು ಹೆಸರನ್ನು ಕಳುಹಿಸಿಕೊಡಲಾಗಿದೆ. ಅದನ್ನು ದೆಹಲಿ ಮಟ್ಟದಲ್ಲಿ ಹೈಕಮಾಂಡ್ ನಿರ್ಧರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಕಳಿಸಲಾಗಿದ್ದು ಹೈಕಮಾಂಡ್ ನಿರ್ಧಾರವೇ ಅಂತಿಮ: ಡಿ ಕೆ ಶಿವಕುಮಾರ್ - ತುಮಕೂರು ಸುದ್ದಿ
ಎಲ್ಲರ ಒಮ್ಮತದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಮಾಡಿ ಕಳುಹಿಸಲಾಗಿದೆ. ಹೈಕಮಾಂಡ್ನಿಂದ ಏನು ಸೂಚನೆ ಬರುತ್ತದೆಯೋ, ಅದರಂತೆ ಚುನಾವಣೆ ಎದುರಿಸಿಲಾಗುವುದು ಎಂದು ತುಮುಕೂರಿನಲ್ಲಿ ಡಿ ಕೆ ಶಿವಕುಮಾರ್ ತಿಳಿಸಿದರು.
ಡಿ ಕೆ ಶಿವಕುಮಾರ್
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಲ್ಲಾ ಸಮುದಾಯಗಳನ್ನು ಗಮನದಲ್ಲಿಟ್ಟುಕೊಂಡು ಹೆಸರನ್ನು ಕಳುಹಿಸಿಕೊಡಲಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಮೂರನೆಯ ಅಭ್ಯರ್ಥಿ ಕುರಿತು ತೀರ್ಮಾನ ಮಾಡಿಲ್ಲ. ಬೇರೆ ಪಕ್ಷದವರಿಗೆ ಮಾತುಕತೆ ನಡೆಸಲು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಅವರು ಕಾಂಗ್ರೆಸ್ಗೆ ಬಂದರೆ ಚಿಂತನೆ ನಡೆಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ಮಳೆ ಅನಾಹುತ ಎದುರಿಸಲು ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚನೆ