ಕರ್ನಾಟಕ

karnataka

ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ

By

Published : Mar 3, 2020, 5:28 PM IST

ಸಂವಿಧಾನ ಉಳಿಸಿ, ಮೀಸಲಾತಿ ರಕ್ಷಿಸಿ ಎಂಬ ಘೋಷ ವಾಕ್ಯದೊಂದಿಗೆ ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

kn_tmk_01_kdss_protest_script_KA10010
ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಆಗ್ರಹ, ದಲಿತ ಸಂಘರ್ಷ ಸಮಿತಿಯಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ...!

ತುಮಕೂರು:ಸಂವಿಧಾನ ಉಳಿಸಿ, ಮೀಸಲಾತಿ ರಕ್ಷಿಸಿ ಎಂಬ ಘೋಷ ವಾಕ್ಯದೊಂದಿಗೆ ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಆಗ್ರಹ: ದಲಿತ ಸಂಘರ್ಷ ಸಮಿತಿಯಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ

ಪರಿಶಿಷ್ಟರ ಜಮೀನು ಉಳಿಸಲು ರಾಜ್ಯ ಸರ್ಕಾರ ಉಭಯ ಸದನಗಳಲ್ಲಿ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯನ್ನ ಯಥಾವತ್ತಾಗಿ ಜಾರಿಗೆತರಬೇಕು. ಬಗರ್ ​​ಹುಕುಂ ಸಾಗುವಳಿ ಸಕ್ರಮ ಮಾಡಲಿ ಹಾಗೂ ಅಕ್ರಮ ಮನೆಗಳ ಸಕ್ರಮ ಮಾಡಿ ಹಕ್ಕುಪತ್ರ ನೀಡಬೇಕು. ಆದಿವಾಸಿ, ಬುಡಕಟ್ಟು ಜನಗಳ ಅಭಿವೃದ್ಧಿಗೆ ಪ್ರಾಧಿಕಾರ/ನಿಗಮ ಸ್ಥಾಪಿಸಬೇಕು ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಲಾಯಿತು.

ದೇಶದಲ್ಲಿ ರೈತರು ಬದುಕಲು ಸಾಧ್ಯವಾಗುತ್ತಿಲ್ಲ. ಒಂದು ಶೌಚಾಲಯ ನಿರ್ಮಿಸಿಕೊಳ್ಳಲು ಆಗುತ್ತಿಲ್ಲ. ಸತ್ತವರಿಗೆ ಸಂಸ್ಕಾರ ಮಾಡಲು ಭೂಮಿ ಇಲ್ಲ. ಕೊಟ್ಟಂತಹ ಭೂಮಿಯನ್ನು ಸರ್ಕಾರ ಕಿತ್ತುಕೊಳ್ಳುವ ಕಾರ್ಯ ಮಾಡುತ್ತಿದೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ದಲಿತರು, ಶೋಷಿತರ ಮೇಲೆ ನಿಜವಾದ ಕಾಳಜಿ ಇದ್ದರೆ ಅಸ್ಪೃಶ್ಯತಾ ನಿವಾರಣೆ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.

ABOUT THE AUTHOR

...view details