ತುಮಕೂರು:ಬೆಡ್ ಸಿಗದೆ ಬೆಂಗಳೂರಿನಿಂದ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಬಂದು ಚಿಕಿತ್ಸೆಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಅವರಲ್ಲಿ ಬಹುತೇಕರು ಉಸಿರಾಟದ ತೊಂದರೆಯಿಂದ ಬಳಲುತ್ತಿರುವವರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಆಕ್ಸಿಜನ್ ಪಡೆದುಕೊಳ್ಳುತ್ತಿರುವವರು ಬಿಡುಗಡೆಯಾದರೆ ಮಾತ್ರ ಬೆಡ್ಗಳು ಸಿಗುವಂತಹ ಪರಿಸ್ಥಿತಿಗೆ ಬಂದು ನಿಂತಿದ್ದೇವೆ. ಜಿಲ್ಲೆಯಲ್ಲಿ 1,900 ಸೋಂಕಿತರು ಆಕ್ಸಿಜನ್ ಬೆಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೇ. 25ರಷ್ಟು ಮಂದಿಯನ್ನು ಆಕ್ಸಿಜನ್ ಬೆಡ್ಗಳಿಂದ ಬಿಡುಗಡೆ ಮಾಡಿದ್ರೆ, 400 ಮಂದಿ ಹೊಸ ರೋಗಿಗಳಿಗೆ ಚಿಕಿತ್ಸೆ ನೀಡಬಹುದಾಗಿದೆ.