ಕರ್ನಾಟಕ

karnataka

ETV Bharat / city

ಗ್ರಾಮ ವಾಸ್ತವ್ಯ ಹೂಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿ ಕೃಷ್ಣ - ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿ ಕೃಷ್ಣ ನ್ಯೂಸ್​

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿ ಕೃಷ್ಣ ಅವರು ಪಾವಗಡ ತಾಲೂಕಿನ ಪೊನ್ನಸಮುದ್ರ ಗ್ರಾಮದಲ್ಲಿ ಕುಂದುಕೊರತೆ ಸಭೆ ನಡೆಸಿ, ಗ್ರಾಮ ವಾಸ್ತವ್ಯ ಹೂಡಿದರು.

Dr. K. Vamshi Krishn
ಡಾ. ಕೆ. ವಂಶಿ ಕೃಷ್ಣ

By

Published : Jan 17, 2020, 11:31 PM IST

ತುಮಕೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ.ವಂಶಿಕೃಷ್ಣ ಅವರು ಪಾವಗಡ ತಾಲೂಕಿನ ಪೊನ್ನಸಮುದ್ರ ಗ್ರಾಮದಲ್ಲಿ ಕುಂದುಕೊರತೆ ಸಭೆ ನಡೆಸಿ, ಗ್ರಾಮ ವಾಸ್ತವ್ಯ ಹೂಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿ ಕೃಷ್ಣ ಸಭೆ

ಇದೇ ವೇಳೆ ಗ್ರಾಮಸ್ಥರು ಹಾಗೂ ಪೊಲೀಸ್ ಸಿಬ್ಬಂದಿ ಸಾಮೂಹಿಕವಾಗಿ ಕುಳಿತು ಸಹಭೋಜನೆ ಮಾಡಿದರು. ಜನಸ್ನೇಹಿ ಪೊಲೀಸ್ ಎಂಬ ಕಲ್ಪನೆಯೊಂದಿಗೆ ಪೊಲೀಸ್ ಇಲಾಖೆ, ಸಾರ್ವಜನಿಕರೊಂದಿಗೆ ಬೆರೆತು ಕೆಲಸ ಮಾಡಲು ನಿರ್ಧರಿಸಿದೆ. ಸಮಾಜದಲ್ಲಿ ಶಾಂತಿ ಕಾಪಾಡಲು ಹಾಗೂ ನೊಂದವರಿಗೆ ಸಹಾಯ ಹಸ್ತ ಚಾಚಲು ಪೊಲೀಸ್ ಸಿಬ್ಬಂದಿ ಸದಾ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ಅದಕ್ಕಾಗಿ ಪೂರಕವಾದ ತರಬೇತಿಯನ್ನು ಪಡೆದು ಬಂದಿರುತ್ತೇವೆ ಎಂದು ಗ್ರಾಮಸ್ಥರಿಗೆ ಸಭೆಯಲ್ಲಿ ತಿಳಿಸಿದರು.

ಇನ್ನು ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧ್ಯಕ್ಷರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

For All Latest Updates

ABOUT THE AUTHOR

...view details