ತುಮಕೂರು: ಎಸ್ಎಸ್ಎಲ್ಸಿ ಪರೀಕ್ಷೆ ಶುಲ್ಕ ಕಟ್ಟಲಾಗದೇ ಆತ್ಮಹತ್ಯೆಗೆ ಯತ್ನಿಸಿದ್ದ ಕೊರಟಗೆರೆಯ ವಿದ್ಯಾರ್ಥಿನಿ ಗ್ರೀಷ್ಮಾ ಇದೀಗ ಪೂರಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಇವರಿಗೆ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಪ್ರೋತ್ಸಾಹ ಧನವಾಗಿ 50 ಸಾವಿರ ರೂ. ಚೆಕ್ನ್ನು ನೀಡಿದ್ದಾರೆ.
ಕೊರಟಗೆರೆಯ ಅವರ ಮನೆಗೆ ನೇರವಾಗಿ ತೆರಳಿದ ಪರಮೇಶ್ವರ್ ವಿದ್ಯಾರ್ಥಿನಿಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು. ಅಲ್ಲದೇ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಿಂದ ವಿದ್ಯಾರ್ಥಿಗೆ ಪ್ರೋತ್ಸಾಹ ಧನವಾಗಿ ಹಣವನ್ನು ನೀಡಲಾಗುತ್ತಿದೆ. ಇದರಲ್ಲಿ ಯಾವುದೇ ರೀತಿಯ ವೈಯಕ್ತಿಕ ಹಿತಾಸಕ್ತಿ ಇಲ್ಲ ಎಂದು ತಿಳಿಸಿದರು.