ತುಮಕೂರು:ಕೋವಿಡ್ ನಂತರ ಶಾಲೆಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ನೀಡುತ್ತಿದ್ದ ಬಿಸಿಯೂಟ ವ್ಯವಸ್ಥೆಯನ್ನು ಪುನಾರಂಭಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ತಿಪಟೂರು ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಬಿಸಿಯೂಟ ವ್ಯವಸ್ಥೆಗೆ 50ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗಳಲ್ಲಿ ಶಿಕ್ಷಕರೇ ಆಹಾರ ಪದಾರ್ಥಗಳ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಮಾಡಬೇಕು. ಈಗಾಗಲೇ ಶಿಕ್ಷಕರಿಗೂ ಕೂಡ ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಶನಿವಾರ ಕೂಡ ಶಾಲೆಗಳು ನಡೆಯಲಿವೆ. ಅಕಸ್ಮಾತ್ ಬಿಸಿಯೂಟದ ವ್ಯವಸ್ಥೆ ಸಾಧ್ಯವಾಗದಿದ್ದಲ್ಲಿ ಅರ್ಧ ದಿನ ಮಾತ್ರ ಶಾಲೆಗಳನ್ನು ನಡೆಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.