ತುಮಕೂರು :ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಜಿಲ್ಲೆಯ ಮುಖಂಡರಲ್ಲಿ ಒಗ್ಗಟ್ಟಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಟಿ ಬಿ ಜಯಚಂದ್ರ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ ಅವರು ಗೆಲ್ಲಲಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದೆ. ಅದನ್ನು ಮತದಾರರು ಸಾಕಾರ ಮಾಡಿದ್ದಾರೆ. ಅವರನ್ನು ಅಭಿನಂದಿಸಲೇಬೇಕು ಎಂದರು.
ವಿಧಾನಪರಿಷತ್ಗೆ ಆಯ್ಕೆಯಾಗಿರುವ ಕ್ಯಾತ್ಸಂದ್ರ ರಾಜೇಂದ್ರ ಎಂಎಲ್ಸಿ ರಾಜೇಂದ್ರ ಆಗಲಿದ್ದಾರೆ. ಬಹುಶಃ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ರಾಜೇಂದ್ರ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಬೇಕೆಂದು 6 ತಿಂಗಳ ಹಿಂದೆಯೇ ತೀರ್ಮಾನಿಸಿದ್ದೆವು.