ತುಮಕೂರು : ಒಂದೇ ಕುಟುಂಬದ ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಮೇಶ್, ಪತ್ನಿ ಶಿಕ್ಷಕಿ ಮಮತಾ ಮತ್ತು ವಿವಾಹಿತ ಪುತ್ರಿ ದೀಪ(25) ಎಂದು ಗುರುತಿಸಲಾಗಿದೆ.
ಹೇಮಾವತಿ ನಾಲೆಗೆ ಹಾರಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕುಟುಂಬದ ಆತ್ಮಹತ್ಯೆ - ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಹೇಮಾವತಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜರುಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಸಾಗರನಹಳ್ಳಿ ಗೇಟ್ ಮೂಲಕ ಹಾದುಹೋಗುವ ನಾಲೆ ಬಳಿ ಮೂವರ ಶವಗಳು ಪತ್ತೆಯಾಗಿವೆ. ರಮೇಶ್ ಅವರು ಕೆ.ಬಿ.ಕ್ರಾಸ್‌ನಲ್ಲಿರುವ ಹೇಮಾವತಿ ಕಚೇರಿಯಲ್ಲಿ ಎಇಇ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಬಿಳಿಗೆರೆಯಲ್ಲಿ ಮನೆ ಮಾಡಿಕೊಂಡು ಕೆಲಸಕ್ಕೆ ಹೋಗಿ ಬರುತ್ತಿದ್ದರು ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಆದರೂ, ರಮೇಶ್ ದಂಪತಿ ಪುತ್ರಿ ದೀಪ ವಿವಾಹವಾಗಿ ಒಂದು ತಿಂಗಳಿಗೆ ಪತಿ ಆಕೆಯನ್ನು ತೊರೆದಿದ್ದರು ಎಂದು ಹೇಳಲಾಗಿದೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಸೆಂಬರ 16ರ ರಾತ್ರಿ 7 ಗಂಟೆ ಸುಮಾರಿಗೆ ನಾಲೆಗೆ ಹಾರಿದ್ದಾರೆ ಎಂದು ತಿಳಿದು ಬಂದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ನಾಲೆಯಿಂದ ಈಗಾಗಲೇ ಶವಗಳನ್ನು ಹೊರತೆಗೆದಿದ್ದಾರೆ.