ತುಮಕೂರು: ನರಭಕ್ಷಕ ಚಿರತೆ ಸೆರೆಗೆ ಅರಣ್ಯ ಇಲಾಖೆ ವಿಶೇಷ ತಂಡದೊಂದಿಗೆ ಕಾರ್ಯಾಚರಣೆ ಮುಂದುವರಿಸಿದೆ. ಇನ್ನೊಂದೆಡೆ ಗ್ರಾಮಸ್ಥರು ಹೊಲಗದ್ದೆಗಳಿಗೆ ಹೋಗುವಾಗ ದೊಣ್ಣೆಗಳನ್ನು ಹಿಡಿದು ಓಡಾಡುತ್ತಿರುವ ದೃಶ್ಯ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಮಣಿಕುಪ್ಪೆ ಗ್ರಾಮದ ಸುತ್ತಮುತ್ತ ಕಂಡು ಬಂದಿದೆ.
ಚಿರತೆ ಸೆರೆಗೆ ಅರಣ್ಯ ಇಲಾಖೆಯಿಂದ ಶೋಧ.. ದೊಣ್ಣೆ ಹಿಡಿದು ಓಡಾಡ್ತಿರುವ ರೈತರು.. - Leopard capture special camp news
ಸ್ಪೆಷಲ್ ಟೈಗರ್ ಫೋರ್ಸ್ (ಎಸ್‌ಟಿಎಫ್)ನಿಂದ ಕಾರ್ಯಾಚರಣೆ ನಡೆಯುತ್ತಿದೆ. ಈಗಾಗಲೇ ಅರಣ್ಯ ಇಲಾಖೆ ಅಳವಡಿಸಿರುವ ಟ್ರ್ಯಾಪ್ ಕ್ಯಾಮೆರಾಗಳಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ. ಇದರ ಆಧಾರದ ಮೇಲೆ ಅರಣ್ಯ ಇಲಾಖೆ ಹಗಲು-ರಾತ್ರಿಯೆನ್ನದೇ ಕಾರ್ಯಾಚರಣೆ ಮುಂದುವರಿಸಿದೆ.
ಡಿಎಫ್ಒ ಗಿರೀಶ್ ನೇತೃತ್ವದಲ್ಲಿ ಮಣ್ಣಿಕುಪ್ಪೆ ಗ್ರಾಮದಲ್ಲಿ ಬೀಡು ಬಿಟ್ಟಿರುವ ಅರಣ್ಯ ಇಲಾಖೆ ಪಡೆ ವಿವಿಧೆಡೆ ಬೋನುಗಳನ್ನು ಇರಿಸಿದೆ. ಈವರೆಗೆ ಅನೇಕ ಕಡೆ ಒಟ್ಟು ನಾಲ್ಕು ಚಿರತೆಗಳು ಓಡಾಡುತ್ತಿರುವುದನ್ನು ಖಚಿತಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಬೋನುಗಳನ್ನು ಇರಿಸಿರುವ ಸ್ಥಳವನ್ನು ಇಂದು ಬದಲಾಯಿಸಿದರು.
ಗುಬ್ಬಿ ತಾಲೂಕಿನ ಮಣಿಕುಪ್ಪೆ,ದೊಡ್ದಮಳವಾಡಿ, ಚಿಕ್ಕಮಳವಾಡಿ, ಸಿಎಎಸ್‌ಪುರ, ಹೆಬ್ಬೂರು ಸುತ್ತಮುತ್ತಲ ಮೀಸಲು ಅರಣ್ಯ ಪ್ರದೇಶದಲ್ಲಿ ಮತ್ತು ದಟ್ಟ ಪೊದೆಗಳ ಬಳಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಪೆಷಲ್ ಟೈಗರ್ ಫೋರ್ಸ್ (ಎಸ್‌ಟಿಎಫ್)ನಿಂದ ಕಾರ್ಯಾಚರಣೆ ನಡೆಯುತ್ತಿದೆ. ಈಗಾಗಲೇ ಅರಣ್ಯ ಇಲಾಖೆ ಅಳವಡಿಸಿರುವ ಟ್ರ್ಯಾಪ್ ಕ್ಯಾಮೆರಾಗಳಲ್ಲಿ ಚಿರತೆಗಳ ಓಡಾಟದ ದೃಶ್ಯ ಸೆರೆಯಾಗಿದೆ. ಇದರ ಆಧಾರದ ಮೇಲೆ ಅರಣ್ಯ ಇಲಾಖೆ ಹಗಲು-ರಾತ್ರಿಯೆನ್ನದೇ ಕಾರ್ಯಾಚರಣೆ ಮುಂದುವರಿಸಿದೆ.