ಕರ್ನಾಟಕ

karnataka

ETV Bharat / city

ಅಭಿಮಾನಿಯ ಮಗುವಿಗೆ 'ಸಿದ್ದರಾಮಯ್ಯ' ಎಂದು ನಾಮಕರಣ ಮಾಡಿದ ವಿಪಕ್ಷ ನಾಯಕ - ಮಗುವಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದ ಅಭಿಮಾನಿ

ತನ್ನ ಮಗನಿಗೆ ಸಿದ್ದರಾಮಯ್ಯ ಅವರ ಹೆಸರಿಡಲು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿ ಮನವಿ ಮಾಡಿದ ಘಟನೆ ತುಮಕೂರಿನಲ್ಲಿ ನಡೆದಿದೆ..

fan who named his child Siddaramaiah
ಅಭಿಮಾನಿಯ ಮಗುವಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದ ಮಾಜಿ ಸಿಎಂ

By

Published : May 23, 2022, 12:24 PM IST

ತುಮಕೂರು :ಅಭಿಮಾನಿಯ ಮಗುವಿಗೆ ಸಿದ್ದರಾಮಯ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನಾಮಕರಣ ಮಾಡಿದ್ದಾರೆ. ತುಮಕೂರಿನ ಬಾಲಭವನದಲ್ಲಿ ನಡೆದ ಗ್ರಂಥಾವಲೋಕನ ಸಂಕೀರ್ಣ ಸಂವಾದ ಕಾರ್ಯಕ್ರಮದಲ್ಲಿ ಈ ನಾಮಕರಣ ಕಾರ್ಯಕ್ರಮ ನೆರವೇರಿದೆ.

ಅಭಿಮಾನಿಯ ಮಗುವಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದ ಮಾಜಿ ಸಿಎಂ..

ಜಿಲ್ಲೆಯ ಮಧುಗಿರಿ ತಾಲೂಕಿನ ಐಡಿಹಳ್ಳಿ ಹೋಬಳಿಯ ತಿಪ್ಪಾಪುರ ಗ್ರಾಮದ ಗಂಗಾಧರಯ್ಯ ಎಂಬುವರು ಸಿದ್ದರಾಮಯ್ಯ ಅವರ ಅಭಿಮಾನಿಯಂತೆ.

ಸಿದ್ದರಾಮಯ್ಯ ಅವರು ತುಮಕೂರಿಗೆ ಬರುತ್ತಾರೆ ಎಂದು ಕುಟುಂಬ ಸಮೇತ ಆಗಮಿಸಿದ್ದ ಅಭಿಮಾನಿ, ತನ್ನ ಮಗನಿಗೆ ಸಿದ್ದರಾಮಯ್ಯ ಎಂದು ಹೆಸರು ಇಡುವಂತೆ ವೇದಿಕೆಯಲ್ಲಿ ಮನವಿ ಮಾಡಿದ್ದಾರೆ.

ತಮ್ಮ ಅಭಿಮಾನಿ ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ, ನಾಮಕರಣ ಮಾಡಿ 500 ರೂ. ಉಡುಗೊರೆಯಾಗಿ ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ ಎನ್ ರಾಜಣ್ಣ, ವೈಎಸ್‌ವಿ ದತ್ತ ಸೇರಿದಂತೆ ಇತರರು ಭಾಗಿಯಾಗಿದ್ದರು.

ಇದನ್ನೂ ಓದಿ:ಬೆಂಗಳೂರು ಅಭಿವೃದ್ಧಿ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿದ್ದರಾಮಯ್ಯ

For All Latest Updates

ABOUT THE AUTHOR

...view details