ತುಮಕೂರು: ಸಚಿವ ಮಾಧುಸ್ವಾಮಿ ಒಬ್ಬ ಸಮರ್ಥ ನಾಯಕ. ಬಿಜೆಪಿ ಸರ್ಕಾರದ ಒಬ್ಬ ಕ್ರೀಯಾಶೀಲ ಸಚಿವ ತುಮಕೂರು ಜಿಲ್ಲೆಯಲ್ಲಿ ಉಸ್ತುವಾರಿಯಾಗಿ ಒಳ್ಳೆ ಕೆಲಸ ಮಾಡಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೊಗಳಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಮಾಧುಸ್ವಾಮಿ ಅವರನ್ನು ಜಿಲ್ಲೆಯ ಜವಾಬ್ದಾರಿಯಿಂದ ಮುಕ್ತಗೊಳಿಸಿದ್ದರಿಂದ ನಮಗೆ ನಿರಾಸೆಯಾಗಿದೆ. ಇದರಿಂದ ತುಮಕೂರು ಜಿಲ್ಲೆಯ ಜನತೆಗೆ ನಷ್ಟವಾಗಿದೆ ಎಂದರು.