ತುಮಕೂರು: ನಾನು 29 ವರ್ಷಗಳ ಕಾಲ ಎಂಪಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದೇನೆ. ಹಾಗಾಗಿ ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದೆ ಆದರೆ, ಕೆಲವರು ತಮ್ಮನ್ನು ಚುನಾವಣೆಗೆ ನಿಲ್ಲುವಂತೆ ಒತ್ತಾಯಿಸಿದರು. ಹಾಗಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.
ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದೆ ಆದ್ರೆ... ನಿಲ್ಲಬೇಕಾಯಿತು: ದೇವೇಗೌಡರು....!! - undefined
ಫಾರೂಕ್ ಅಬ್ದುಲ್ಲಾ, ಮಮತಾ ಬ್ಯಾನರ್ಜಿ, ಗುಲಾಂ ನಬಿ ಆಜಾದ್ ಸೇರಿದಂತೆ ಹಲವು ಗೆಳೆಯರು ನನಗೆ ಚುನಾವಣೆಗೆ ನಿಲ್ಲುವಂತೆ ಸಲಹೆ ನೀಡಿದ್ದರು. ಅದಕ್ಕಾಗಿ ನಾನು ಈ ಬಾರಿಯೂ ಚುನಾವಣೆಗೆ ನಿಲ್ಲುತ್ತಿದ್ದೇನೆ ಎಂದು ದೇವೇಗೌಡ ಹೇಳಿದ್ದಾರೆ.
ದೇವೇಗೌಡ
ನಾನು ಪ್ರಜ್ವಲ್ ರೇವಣ್ಣ ಹಾಸನದಿಂದಲೇ ಸ್ಪರ್ಧಿಸಬೇಕು ಎಂದು ನಿರ್ಧಾರ ಮಾಡಿದ್ದೆ ಎಂದು ಇದೇ ವೇಳೆ ದೇವೇಗೌಡರು ಸ್ಪಷ್ಟಪಡಿಸಿದರು.
ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಸುದ್ದಿಗೋಷ್ಠಿ ನಡೆಸಿದ ಅವರು, ಫರೂಕ್ ಅಬ್ದುಲ್ಲಾ, ಮಮತಾ ಬ್ಯಾನರ್ಜಿ, ಗುಲಾಂ ನಬಿ ಆಜಾದ್ ಸೇರಿದಂತೆ ಹಲವು ಗೆಳೆಯರು ತಮಗೆ ಚುನಾವಣೆಗೆ ನಿಲ್ಲುವಂತೆ ಸಲಹೆ ನೀಡಿದ್ದರು. ಅದಕ್ಕಾಗಿ ನಾನು ಈ ಬಾರಿಯೂ ಚುನಾವಣೆಗೆ ನಿಲ್ಲುತ್ತಿದ್ದೇನೆ ಎಂದು ಘೋಷಿಸಿದರು.
Last Updated : Mar 25, 2019, 5:56 PM IST