ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ದೇಗುಲಕ್ಕೆ ಭಕ್ತರೊಬ್ಬರು 10 ಕೋಟಿ ರೂ. ಮೌಲ್ಯದ ಚಿನ್ನದ ರಥವನ್ನು ಸಮರ್ಪಣೆ ಮಾಡಲಿದ್ದಾರೆ.
ಮೂಲತಃ ಯಡಿಯೂರಿನವರಾದ ಬೆಂಗಳೂರಿನ ಜೆಪಿ ನಗರದ ಶ್ರೀ ಸಿದ್ದಲಿಂಗೇಶ್ವರ ಚಿತ್ರ ಮಂದಿರದ ಮಾಲೀಕ ಶಿವಣ್ಣ, ದೇಗುಲಕ್ಕೆ ಚಿನ್ನದ ರಥ ನೀಡಲು ಮುಂದಾಗಿದ್ದಾರೆ. ಈಗಾಗಲೇ ರಥ ನಿರ್ಮಾಣ ಕಾರ್ಯ ಅಂತಿಮ ಹಂತಕ್ಕೆ ಬಂದಿದ್ದು, ಸಮರ್ಪಿಸುವ ಕುರಿತು ಆಡಳಿತಾಧಿಕಾರಿಗಳ ಜೊತೆ ಮಾತುಕತೆ ಕೂಡ ನಡೆಸಿದ್ದಾರೆ.