ತುಮಕೂರು: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಉಂಟಾಗಿದೆ. ಅಲ್ಲಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜೊತೆಗೆ ಮರದ ಬೃಹತ್ ಕೊಂಬೆಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ.
ತುಮಕೂರಿನಲ್ಲಿ ಭಾರಿ ಮಳೆಗೆ ನೆಲಕ್ಕುರುಳಿದ ವಿದ್ಯುತ್ ಕಂಬಗಳು - undefined
ತುಮಕೂರು ನಗರದ ಕ್ರೀಡಾಂಗಣದ ಸುತ್ತಮುತ್ತ ಮರದ ಕೊಂಬೆಗಳು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದ್ದು, ಪಾಲಿಕೆ ಸಿಬ್ಬಂದಿ ತೆರವು ಕಾರ್ಯದಲ್ಲಿ ನಿರತರಾಗಿದ್ದಾರೆ.
ಮಳೆಗೆ ನೆಲಕ್ಕುರುಳಿದ ವಿದ್ಯುತ್ ಕಂಬಗಳು
ವಿದ್ಯಾನಗರದಲ್ಲಿ ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ರಾತ್ರಿಯಿಡಿ ವಿದ್ಯಾನಗರ ಬಡಾವಣೆ ಮತ್ತು ಕುವೆಂಪುನಗರ ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿತ್ತು.
ಇನ್ನು ತುಮಕೂರು ನಗರದ ಕ್ರೀಡಾಂಗಣದ ಸುತ್ತಮುತ್ತ ಮರದ ಕೊಂಬೆಗಳು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದ್ದು, ಪಾಲಿಕೆ ಸಿಬ್ಬಂದಿ ತೆರವು ಕಾರ್ಯದಲ್ಲಿ ನಿರತರಾಗಿದ್ದಾರೆ.