ಕರ್ನಾಟಕ

karnataka

ಸ್ಮಾರ್ಟ್​ ಸಿಟಿ ಯೋಜನೆಯಡಿ ಹೈಟೆಕ್ ಬಸ್​ ನಿಲ್ದಾಣ ನಿರ್ಮಾಣ

By

Published : Jan 8, 2020, 10:50 PM IST

ಸ್ಮಾರ್ಟ್​ ಸಿಟಿ ಯೋಜನೆಯಡಿ ತುಮಕೂರು ಬಸ್ ನಿಲ್ದಾಣವನ್ನು ಹೈಟೆಕ್ ನಿಲ್ದಾಣವನ್ನಾಗಿ ಮಾರ್ಪಾಡು ಮಾಡುವ ಹಿನ್ನೆಲೆ ಈಗ ಇರುವ ಬಸ್ ನಿಲ್ದಾಣವನ್ನು ಬಸವೇಶ್ವರ ರಸ್ತೆಯಲ್ಲಿರುವ ಕೆಎಸ್​ಆರ್​ಟಿಸಿ ತುಮಕೂರು ಘಟಕ 1ಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಶಾಸಕ ಜ್ಯೋತಿ ಗಣೇಶ್ ಮನವಿ ಮಾಡಿಕೊಂಡರು.

High Tech Bus Stand built Under Smart City Project in tumkur
ತುಮಕೂರಿನಲ್ಲಿ ಹೈಟೆಕ್ ಬಸ್​ ನಿಲ್ದಾಣ ನಿರ್ಮಾಣ

ತುಮಕೂರು: ಸ್ಮಾರ್ಟ್​ ಸಿಟಿ ಯೋಜನೆಯಡಿ ತುಮಕೂರು ಬಸ್ ನಿಲ್ದಾಣವನ್ನು ಹೈಟೆಕ್ ನಿಲ್ದಾಣವನ್ನಾಗಿ ಮಾರ್ಪಾಡು ಮಾಡುವ ಹಿನ್ನೆಲೆ ಈಗ ಇರುವ ಬಸ್ ನಿಲ್ದಾಣವನ್ನು ಬಸವೇಶ್ವರ ರಸ್ತೆಯಲ್ಲಿರುವ ಕೆಎಸ್​ಆರ್​ಟಿಸಿ ತುಮಕೂರು ಘಟಕ 1ಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಶಾಸಕ ಜ್ಯೋತಿಗಣೇಶ್ ಮನವಿ ಮಾಡಿಕೊಂಡರು.

ತುಮಕೂರಿನಲ್ಲಿ ಹೈಟೆಕ್ ಬಸ್​ ನಿಲ್ದಾಣ ನಿರ್ಮಾಣ

ತಾತ್ಕಾಲಿಕ ಬಸ್ ನಿಲ್ದಾಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಶೋಕ್​ ರಸ್ತೆಯಲ್ಲಿರುವ ಹಳೆ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಭಾಗದಲ್ಲಿ ನೂತನ, ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಿಸಲು ಸುಮಾರು 82 ಕೋಟಿ ರೂ.ಗಳ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಸುಮಾರು 2 ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಅದಕ್ಕೆ ಪರ್ಯಾಯವಾಗಿ ಕೆಎಸ್ಆರ್​ಟಿಸಿ ನಿಗಮದ ತುಮಕೂರು ಘಟಕ-1ಕ್ಕೆ ಸ್ಥಳಾಂತರಗೊಳಿಸಲಾಗಿದೆ ಎಂದರು.

ಇನ್ನು ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು, ವಿಶಾಲವಾಗಿರುವ ಈ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿಕೊಂಡರು.

ಈ ವೇಳೆ ಮಹಾನಗರ ಪಾಲಿಕೆಯ ಮೇಯರ್ ಲಲಿತ ರವೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಮಹಾನಗರ ಪಾಲಿಕೆ ಆಯುಕ್ತ ಭೂಬಾಲನ್, ಕೆಎಸ್​ಆರ್​ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್ ಮುಂತಾದವರು ಹಾಜರಿದ್ದರು.

ABOUT THE AUTHOR

...view details