ತುಮಕೂರು: ರಾತ್ರಿಯಿಡಿ ಸುರಿದ ಭಾರಿ ಮಳೆಗೆ ತುಮಕೂರು ತಾಲೂಕಿನ ಹೊರವಲಯದಲ್ಲಿರುವ ದೇವರಾಯನದುರ್ಗದ ಬೆಟ್ಟದಲ್ಲಿ ಗುಡ್ಡ ಕುಸಿತವಾಗಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ.
ಯೋಗನರಸಿಂಹ ಸ್ವಾಮಿ ದೇವಾಲಯಕ್ಕೆ ತೆರಳುವ ರಸ್ತೆ ರಸ್ತೆಗೆ ಅಡ್ಡಲಾಗಿ ಬಂಡೆಗಳು ಕುಸಿದುಬಿದ್ದಿವೆ. ಪರಿಣಾಮ, ಸಂಚಾರ ಸ್ಥಗಿತಗೊಂಡು, ಪ್ರಯಾಣಿಕರಿಗೆ, ಭಕ್ತರಿಗೆ ಸಮಸ್ಯೆಯಾಗಿದೆ. ದೇವಾಲಯದ ಅರ್ಚಕರಿಗೆ ಮಾತ್ರ ಬೆಟ್ಟಕ್ಕೆ ತೆರಳಲು ಅವಕಾಶ ಕಲ್ಪಿಸಲಾಗಿದೆ.