ತುಮಕೂರು:ಜೆಡಿಎಸ್ನಿಂದ ಉಚ್ಛಾಟನೆ ಮಾಡಿರುವುದರಲ್ಲಿ ಹೊಸದೇನಿಲ್ಲ. ಉಚ್ಛಾಟನೆ ಮಾಡಿದ್ದು ನನಗೆ ಸಂತಸ ತಂದಿದೆ ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್ ಪ್ರತಿಕ್ರಿಯೆ ನೀಡಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈ ಬೆಳವಣಿಗೆ ಮುಜುಗರ, ಅವಮಾನ ಎಂದು ನನಗೆ ಅನಿಸೋದಿಲ್ಲ ಎಂದಿದ್ದಾರೆ.
ಜೆಡಿಎಸ್ನಿಂದ ಉಚ್ಚಾಟನೆ ಮಾಡಿರೋದು ನನಗೆ ಸಂತಸ ತಂದಿದೆ: ಗುಬ್ಬಿ ಶಾಸಕ ಶ್ರೀನಿವಾಸ್ - ಜೆಡಿಎಸ್ನಿಂದ ಉಚ್ಚಾಟನೆ ಮಾಡಿರುವುದು ನನಗೆ ಸಂತೋಷವಾಗಿದೆ
ಒಂದು ವರ್ಷದ ಹಿಂದೆ ನನ್ನ ವಿರುದ್ಧ ಅವರು ಅಭ್ಯರ್ಥಿಯನ್ನು ತಯಾರು ಮಾಡಿದಾಗಲೇ ನಾನು ಪಕ್ಷದಿಂದ ಉಚ್ಚಾಟಿತನಾಗಿದ್ದೆ. ಇದೇನು ಹೊಸದೇನು ಅಲ್ಲ. ನನಗೇನು ಇದು ಅವಮಾನ, ಮುಜುಗರ ಎಂದು ಅನಿಸುತ್ತಿಲ್ಲ ಎಂದು ಜೆಡಿಎಸ್ ಶಾಸಕ ಶ್ರೀನಿವಾಸ್ ಪ್ರತಿಕ್ರಿಯೆ ನೀಡಿದ್ದಾರೆ.
ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್
ಯಾವ ಪಕ್ಷದಲ್ಲಾದರೂ ಇದು ನಡೆಯುವಂತಹದ್ದೇ. ಅವರು ನನ್ನ ವಿರುದ್ದ ಒಂದು ವರ್ಷದ ಹಿಂದೆ ಅಭ್ಯರ್ಥಿಯನ್ನು ತಯಾರು ಮಾಡಿದಾಗಲೇ ನಾನು ಉಚ್ಛಾಟಿತನಾಗಿದ್ದೆ. ಡಿಸೆಂಬರ್ನಲ್ಲಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಡಿಸೆಂಬರ್ ಕಳೆದ ಮೇಲೆ ರಾಜೀನಾಮೆ ಕೊಟ್ಟು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಸ್ಪೀಕರ್ ಬಳಿ ಹೋದರೆ ಏನಾಗುತ್ತೆ, ವಿಪ್ ಉಲ್ಲಂಘನೆಯಾದರೆ ಸ್ಪೀಕರ್ ಕ್ರಮ ಕೈಗೊಳ್ಳಬಹುದು ಎಂದರು.
ಇದನ್ನೂ ಓದಿ :ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಜೆಡಿಎಸ್ನಿಂದ ಇಬ್ಬರು ಶಾಸಕರ ಉಚ್ಚಾಟನೆ