ತುಮಕೂರು/ ಹಾಸನ:ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾದು ನೋಡುತ್ತಿದ್ದೇನೆ, ನಾನು ಯಾವುದೇ ಕಾರಣಕ್ಕೂ ರಾಜ್ಯಪಾಲರನ್ನು ಭೇಟಿಯಾಗುವುದಿಲ್ಲ, ದೆಹಲಿಗೂ ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ನಾನು ಯಾವುದೇ ಕಾರಣಕ್ಕೂ ರಾಜ್ಯಪಾಲರನ್ನು ಭೇಟಿಯಾಗುವುದಿಲ್ಲ: ಬಿಎಸ್ವೈ - tumakur
ನಾನು ಬೇರೆ ಪಕ್ಷದ ಯಾವುದೇ ಶಾಸಕರನ್ನು ಸಂಪರ್ಕಿಸಿಲ್ಲ, ಜೊತೆಗೆ ಯಾವುದೇ ಕಾರಣಕ್ಕೂ ರಾಜ್ಯಪಾಲರನ್ನು ಭೇಟಿಯಾಗುವುದಿಲ್ಲ, ದೆಹಲಿಗೂ ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ರಾಜಕೀಯ ಬೆಳವಣಿಗೆ ಕುರಿತು ಬಿಎಸ್ವೈ ಪ್ರತಿಕ್ರಿಯೆ
ಹಾಸನ ಜಿಲ್ಲೆ ನವಿಲೆ ಗ್ರಾಮದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಬೇರೆ ಪಕ್ಷದ ಯಾವುದೇ ಶಾಸಕರನ್ನು ಸಂಪರ್ಕಿಸಿಲ್ಲ, ಮುಂದೆ ಏನಾಗುತ್ತದೆ ಎಂದು ಕಾದು ನೋಡೋಣ ಎಂದು ಹೇಳಿದರು.
ಇನ್ನು ತುಮಕೂರು ನೀರಿನ ಸಮಸ್ಯೆ ಕುರಿತು ಮಾತನಾಡಿದ ಅವರು, ಜಿಲ್ಲೆಗೆ ಬರಬೇಕಾದ ನೀರಿನ ಪ್ರಮಾಣ ಸರಿಯಾಗಿ ಬಾರದ ಕಾರಣ ಜನ ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಅಧಿಕಾರಿಗಳನ್ನು ಕಚೇರಿಗೆ ಕರೆಸಿ ಚರ್ಚೆ ಮಾಡುತ್ತೇನೆ, ಶಾಶ್ವತವಾಗಿ ಸಮಸ್ಯೆ ಬಗೆಹರಿಸುತ್ತೇನೆ ಎಂದರು.
Last Updated : Jul 7, 2019, 5:12 PM IST
TAGGED:
tumakur