ಕರ್ನಾಟಕ

karnataka

ETV Bharat / city

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ.. ಚಾಮರಾಜನಗರ, ತುಮಕೂರು,ರಾಮನಗರದಲ್ಲಿ ಅದ್ಧೂರಿ ಆಚರಣೆ

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆಯನ್ನ ಚಾಮರಾಜನಗರ, ತುಮಕೂರು, ರಾಮನಗರ ಸೇರಿದಂತೆ ರಾಜ್ಯಾದ್ಯಂತ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಧ್ವಜಾರೋಹಣ ನೇರವೇರಿಸಿದರು.

independence day celebration
ಅಮೃತ ಮಹೋತ್ಸವ ಧ್ವಜಾರೋಹಣ

By

Published : Aug 15, 2022, 11:25 AM IST

Updated : Aug 15, 2022, 1:50 PM IST

ಚಾಮರಾಜನಗರ/ ತುಮಕೂರು/ರಾಮನಗರ: ದೇಶಾದ್ಯಂತ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ‌.ಸೋಮಣ್ಣ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು‌.

ಧ್ವಜಾರೋಹಣ ಬಳಿಕ ಪೊಲೀಸರು, ಅಬಕಾರಿ ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನದ ಗೌರವ ವಂದನೆಯನ್ನು ಸ್ವೀಕರಿಸಿದ ಸಚಿವ ವಿ‌.ಸೋಮಣ್ಣ ಬಳಿಕ ಮಾತನಾಡಿ, 'ಚಾಮರಾಜನಗರ ಸಮಗ್ರ ಅಭಿವೃದ್ಧಿಗೆ ಸರ್ಕಾರ ತೀರ್ಮಾನಿಸಿದೆ ಎಂದರು. ಸಾರ್ವಜನಿಕ ಉದ್ದೇಶಕ್ಕಾಗಿ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ 192 ಎಕರೆ ಜಮೀನು ಮಂಜೂರು ಮಾಡಲಾಗಿದೆ.

ಚಾಮರಾಜನಗರ, ತುಮಕೂರು,ರಾಮನಗರದಲ್ಲಿ ಅದ್ಧೂರಿ ಆಚರಣೆ

7 ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ 111 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಚಾಮರಾಜನಗರದಲ್ಲಿ ಔಷಧಿ ಉಗ್ರಾಣಕ್ಕಾಗಿ ಎರಡು ಜಮೀನು ಮಂಜೂರಾಗಿ 3.65 ಕೋಟಿ ರೂ. ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ. ಅಮೃತ ಸರೋವರ ಯೋಜನೆಯಡಿ ಈಗಾಗಲೇ 15 ಕೆರೆ ಅಭಿವೃದ್ಧಿಪಡಿಸಲಾಗಿದ್ದು, ಎರಡನೇ ಹಂತದಲ್ಲಿ 60 ಕೆರೆ ಅಭಿವೃದ್ಧಿ ಆಗಲಿದೆ ಎಂದರು.

ಸಿದ್ಧಗಂಗಾ ಮಠದಲ್ಲಿ ಗೃಹ ಸಚಿವರಿಂದ ಧ್ವಜಾರೋಹಣ: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಗೃಹ ಸಚಿವ ಆರಗ ಜ್ಞಾನೇಂದ್ರ ಧ್ವಜಾರೋಹಣ ಮಾಡಿದರು. ಸಿದ್ಧಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು. ಈ ವೇಳೆ, ಮಠದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, ನಗರ ಶಾಸಕ ಜ್ಯೋತಿ ಗಣೇಶ್, ಪಾಲಿಕೆ ಮೇಯರ್ ಕೃಷ್ಣಪ್ಪ ಸೇರಿದಂತೆ ಹಲವರು ಭಾಗಿಯಾಗಿದ್ದರು.

ರಾಮನಗರ ಧ್ವಜಾರೋಹಣ:ರೇಷ್ಮೆ ನಗರಿ ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಡಾ.ಅಶ್ವತ್ಥ ನಾರಾಯಣ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಎನ್​ಸಿಸಿ ಸೇರಿದಂತೆ ರಾಮನಗರದ ವಿವಿಧ ಶಾಲಾ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾ ಡಾ‌.ಅವಿನಾಶ್ ಮೆನನ್ ರಾಜೇಂದ್ರನ್, ಎಸ್​ಪಿ ಸಂತೋಷ್ ಬಾಬು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಇದನ್ನೂ ಓದಿ:ವಿವಿಧತೆಯಲ್ಲಿ ಏಕತೆಯೇ ಭಾರತದ ಶಕ್ತಿ.. 100ನೇ ವರ್ಷದ ಸ್ವಾತಂತ್ರ್ಯ ದಿನಕ್ಕೆ ಪಂಚ ಪ್ರಾಣ ಪ್ರತಿಪಾದಿಸಿದ ಮೋದಿ

Last Updated : Aug 15, 2022, 1:50 PM IST

ABOUT THE AUTHOR

...view details