ಕರ್ನಾಟಕ

karnataka

ETV Bharat / city

ಪರಮ್​​ ಮೇಲೆ ಐಟಿ ದಾಳಿ: ಇಂದೂ ಕೂಡ ಮುಂದುವರೆಯಲಿದೆ ಪರಿಶೀಲನೆ - IT grill to former DCM parameshwar

ನಿನ್ನೆ ರಾತ್ರಿ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್​​ರ ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜಿನ ವಸತಿಗೃಹದಲ್ಲಿ ಉಳಿದುಕೊಂಡಿದ್ದ 20 ಕ್ಕೂ ಹೆಚ್ಚು ಅಧಿಕಾರಿಗಳು ರಾತ್ರಿ ತಡರಾತ್ರಿವರೆಗೂ ದಾಖಲೆಗಳ ಪರಿಶೀಲನೆಯಲ್ಲಿ ಮಗ್ನರಾಗಿದ್ದರು. ಇಂದು ಕೂಡ ದಾಖಲೆಗಳ ಪರಿಶೀಲನೆ ಮುಂದುವರಿಸಲಿದ್ದಾರೆ.

ಪರಮ್​​ ಮೇಲೆ ಐಟಿ ದಾಳಿ

By

Published : Oct 12, 2019, 9:30 AM IST

ತುಮಕೂರು: ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್​​ರ ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಇಂದು ಕೂಡ ಐಟಿ ಇಲಾಖೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದುವರಿಸಲಿದ್ದಾರೆ.

ನಿನ್ನೆ ರಾತ್ರಿ ಕಾಲೇಜಿನ ವಸತಿಗೃಹದಲ್ಲಿ ಉಳಿದುಕೊಂಡಿದ್ದ 20 ಕ್ಕೂ ಹೆಚ್ಚು ಅಧಿಕಾರಿಗಳು ರಾತ್ರಿ ತಡರಾತ್ರಿವರೆಗೂ ದಾಖಲೆಗಳ ಪರಿಶೀಲನೆಯಲ್ಲಿ ಮಗ್ನರಾಗಿದ್ದರು. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಿರಂತರವಾಗಿ ಸುದೀರ್ಘವಾಗಿ ಪರಿಶೀಲನೆ ನಡೆಸಿದ್ದಾರೆ. ಮುಂಜಾನೆ 3.30ರ ವರೆಗೂ ಐಟಿ ಅಧಿಕಾರಿಗಳು ಸಾಕಷ್ಟು ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಇಂದು ಬೆಳಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸುವ ಸಾಧ್ಯತೆಗಳಿವೆ.

ABOUT THE AUTHOR

...view details