ತುಮಕೂರು: ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತಹ ಸರ್ಕಾರ ಮಾಡಬೇಕಾದ ಕೆಲಸಗಳನ್ನು ಯುವಕರು ಮತ್ತು ಖಾಸಗಿಯವರು ಮಾಡುತ್ತಿದ್ದಾರೆ ಎಂದು ಶಾಸಕ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಸರ್ಕಾರಕ್ಕಿಂತ ದಾನಿಗಳು ಹೆಚ್ಚು ವೈದ್ಯಕೀಯ ಸೌಲಭ್ಯ ಕಲ್ಪಿಸುತ್ತಿದ್ದಾರೆ: ಶಾಸಕ ಜಮೀರ್ ಅಹಮದ್ - ತುಮಕೂರು ಜಮೀರ್ ಅಹಮದ್ ಖಾನ್
ಸಂಬಂಧಿಕರೇ ಶವಗಳನ್ನು ಸಂಸ್ಕಾರ ಮಾಡಲು ಹಿಂದೇಟು ಹಾಕುತ್ತಿರುವ ಈ ಸಂದರ್ಭದಲ್ಲಿ, ಕೆಲವೆಡೆ ಮುಸ್ಲಿಂ ಯುವಕರು ಮುಂದೆ ಬಂದು ಅಂತ್ಯ ಸಂಸ್ಕಾರ ನಡೆಸುತ್ತಿದ್ದಾರೆ. ಸಂಕಷ್ಟದಲ್ಲಿರುವವರ ಜತೆಗೆ ನಿಲ್ಲುತ್ತಿದ್ದಾರೆ..
jamir ahmad
ತುಮಕೂರಿನ ಸದಾಶಿವ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆ್ಯಂಬುಲೆನ್ಸ್ಗಳು ಹಾಗೂ ಆಕ್ಸಿಜನ್ ಸಿಲಿಂಡರ್ಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ದಾನಿಗಳು ಸರ್ಕಾರಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ ಸೋಂಕಿತರಿಗೆ ನೆರವಾಗುತ್ತಿದ್ದಾರೆ ಎಂದು ತಿಳಿಸಿದರು.
ಹೀಗಾಗಿ, ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಅಲ್ಲದೆ ಶವಗಳನ್ನು ಸಂಸ್ಕಾರ ಮಾಡಲು ಹಿಂದೇಟು ಹಾಕುತ್ತಿರುವ ಈ ಸಂದರ್ಭದಲ್ಲಿ ಕೆಲವೆಡೆ ಮುಸ್ಲಿಂ ಯುವಕರು ಮುಂದೆ ಬಂದು ಕೆಲಸ ಮಾಡುತ್ತಿದ್ದಾರೆ ಎಂದರು.
Last Updated : May 25, 2021, 10:55 PM IST