ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕದೆ ಅಡ್ಡಮತದಾನ ಮಾಡಿದ್ದಾರೆ ಎಂದು ಆರೋಪಿಸಿ ಗುಬ್ಬಿ ಶಾಸಕ ಶ್ರೀನಿವಾಸ್ ಮನೆ ಮುಂದೆ ಇಂದು ಜೆಡಿಎಸ್ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ: ಶಾಸಕ ಶ್ರೀನಿವಾಸ್ ಮನೆ ಮುಂದೆ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ - GUBBI JDS MLA SHRINIVAS
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಜಿಲ್ಲಾಧ್ಯಕ್ಷ ಆಂಜನಪ್ಪ ನೇತೃತ್ವದಲ್ಲಿ ಶಾಸಕ ಶ್ರೀನಿವಾಸ ಅವರ ಮನೆ ಮುಂದೆ ಜಮಾಯಿಸಿದ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶಾಸಕ ಶ್ರೀನಿವಾಸ್ ಮನೆ ಮುಂದೆ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ
ಜೆಡಿಎಸ್ ಜಿಲ್ಲಾಧ್ಯಕ್ಷ ಆಂಜನಪ್ಪ ನೇತೃತ್ವದಲ್ಲಿ ಶಾಸಕ ಶ್ರೀನಿವಾಸ ಮನೆ ಮುಂದೆ ಜಮಾಯಿಸಿದ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ನಂತರ ಸ್ಥಳದಲ್ಲಿದ್ದ ಪೊಲೀಸರು ಕಾರ್ಯಕರ್ತರನ್ನು ಸಮಾಧಾನಪಡಿಸಿದರು. ಇದೇ ವೇಳೆ, ಶಾಸಕ ಶ್ರೀನಿವಾಸ್ ಕೂಡ ಆಕ್ರೋಶಭರಿತರಾಗಿ ಜೆಡಿಎಸ್ ಕಾರ್ಯಕರ್ತರೊಂದಿಗೆ ವಾಗ್ವಾದ ನಡೆಸಿದರು.
ಇದನ್ನೂ ಓದಿ:ನಾನು ಖಾಲಿ ಮತಪತ್ರ ಹಾಕಿದ್ದರೆ ರಾಜಕೀಯ ನಿವೃತ್ತಿ ಪಡೆಯುವೆ: ಜೆಡಿಎಸ್ ಶಾಸಕ ಶ್ರೀನಿವಾಸ್