ತುಮಕೂರು: ನನ್ನ ಕೊನೆಯ ಉಸಿರು ಇರುವವರೆಗೂ ಜೆಡಿಎಸ್ ಸಿದ್ಧಾಂತ, ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಬಿಟ್ಟು ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಸ್ಪಷ್ಟಪಡಿಸಿದ್ದಾರೆ.
ನಾನು ಇದ್ದರೂ ಜೆಡಿಎಸ್, ಸತ್ತರೂ ಜೆಡಿಎಸ್: ಗೌರಿಶಂಕರ್ - JDS MLA Gourishankar pressmeet in tumkur
ನಾನು ಜೆಡಿಎಸ್ ಪಕ್ಷದಲ್ಲಿಯೇ ಇರುತ್ತೇನೆ. ನೀವು ಊಹಾಪೋಹಗಳ ಕುರಿತು ಚರ್ಚೆ ಮಾಡಿದರೆ ಅದಕ್ಕೆ ನಾನು ಜವಾಬ್ದಾರನಲ್ಲ ಎಂದು ಜೆಡಿಎಸ್ ಶಾಸಕ ಗೌರಿಶಂಕರ್ ಸ್ಪಷ್ಟಪಡಿಸಿದ್ದಾರೆ.
Gourishankar
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ನಾನೇ ರಾಜ. ರಾಜನಾಗಿದ್ದುಕೊಂಡು ಮಣ್ಣು ತಿನ್ನುವ ಕೆಲಸ ಮಾಡುವುದಿಲ್ಲ. ಯಾವುದೇ ಕಾರಣಕ್ಕೂ ಬೇರೆ ಪಕ್ಷಕ್ಕೆ ಸೇರುವುದಿಲ್ಲ ಎಂದು ಹೇಳಿದರು.
ಇನ್ನೊಂದೆಡೆ, ಮಾಜಿ ಸಚಿವ ದಿವಂಗತ ಸಿ.ಚನ್ನಿಗಪ್ಪನವರ ಇಬ್ಬರು ಮಕ್ಕಳು ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.