ತುಮಕೂರು: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳು ಅವೈಜ್ಞಾನಿಕವಾಗಿವೆ ಎಂದು ನಗರ ಶಾಸಕ ಜ್ಯೋತಿ ಗಣೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸ್ಮಾರ್ಟ್ ಸಿಟಿ ಕಾಮಗಾರಿಗಳು ಅವೈಜ್ಞಾನಿಕ: ಜ್ಯೋತಿ ಗಣೇಶ್
ಅವೈಜ್ಞಾನಿಕವಾಗಿ ಸ್ಮಾರ್ಟ್ ಸಿಟಿ ಕಾಮಗಾರಿ ಕ್ರಿಯಾ ಯೋಜನೆ ರೂಪಿಸಲಾಗಿದೆ. ಫುಟ್ಪಾತ್ಗಳ ಮೇಲೆ ಸೈಕಲ್ ಟ್ರ್ಯಾಕ್ಗಳನ್ನು ನಿರ್ಮಾಣ ಮಾಡಲಾಗಿದ್ದು, ಅದನ್ನು ತೆರವುಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಜ್ಯೋತಿ ಗಣೇಶ್ ತಿಳಿಸಿದ್ದಾರೆ.
ಅವೈಜ್ಞಾನಿಕವಾಗಿ ಸ್ಮಾರ್ಟ್ ಸಿಟಿ ಕಾಮಗಾರಿ ಕ್ರಿಯಾ ಯೋಜನೆ ರೂಪಿಸಲಾಗಿದೆ. ಸಾರ್ವಜನಿಕರಿಗೆ ಸ್ಮಾರ್ಟ್ ಸಿಟಿ ಯೋಜನೆಯ ಸಂಪೂರ್ಣ ಲಾಭ ದೊರೆಯಬೇಕಿದೆ. ಆದರೆ ಶೇಕಡಾ 10ರಷ್ಟು ಯೋಜನೆ ಕೈಬಿಡಲಾಗಿದೆ. ಹೀಗಾಗಿ ಅಮೃತ್ ನಗರ ಯೋಜನೆಯಡಿ ಬಹುತೇಕ ಕಾಮಗಾರಿಗಳನ್ನು ತುಮಕೂರು ನಗರದಲ್ಲಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ತಿಳಿಸಿದರು.
ಫುಟ್ಪಾತ್ ಗಳ ಮೇಲೆ ಸೈಕಲ್ ಟ್ರ್ಯಾಕ್ಗಳನ್ನು ನಿರ್ಮಾಣ ಮಾಡಲಾಗಿದ್ದು, ಅದನ್ನು ತೆರವುಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರೀತಿಯ ಅವೈಜ್ಞಾನಿಕ ಯೋಜನೆಗಳಿಂದ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಗೊಂದಲ ನಿರ್ಮಾಣವಾಗಿದೆ ಎಂದು ಜ್ಯೋತಿ ಗಣೇಶ್ ಹೇಳಿದರು.