ತುಮಕೂರು:ಬೆಂಗಳೂರಿನಲ್ಲಿಯೇಪ್ರಗತಿಪರ ರೈತರಿಗೆ 'ಕೃಷಿ ಕರ್ಮಣ್ ಪ್ರಶಸ್ತಿ' ವಿತರಣೆ ಮತ್ತು 'ಕಿಸಾನ್ ಸಮ್ಮಾನ್ ನಿಧಿ' ಯೋಜನೆ ವಿಸ್ತರಣೆ ಕಾರ್ಯಕ್ರಮವನ್ನು ಈ ಮೊದಲು ನಿಗದಿ ಮಾಡಲಾಗಿತ್ತು. ಆದರೆ, ಪ್ರಧಾನಿ ಮೋದಿ ಅವರೇ ಕಾರ್ಯಕ್ರಮ ಅಲ್ಲಿ ಬೇಡ ಎಂದು ಸೂಚಿಸಿದ್ದರು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದರು.
ತುಮಕೂರಿನಲ್ಲಿ ಕೃಷಿ ಸಮ್ಮಾನ್ ಕಾರ್ಯಕ್ರಮ ಆಯೋಜಿಸಲು ಮೋದಿ ಸೂಚಿಸಿದ್ದೇಕೆ ಗೊತ್ತೇ? - central minister narendra singh tomar
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಇಂದು ಪ್ರಧಾನಿ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದರು.
ಬೆಂಗಳೂರು ಹೊರತುಪಡಿಸಿ ಅದರ ಪಕ್ಕದ ಜಿಲ್ಲೆಗಳಲ್ಲೇ ಈ ಕಾರ್ಯಕ್ರಮ ಆಯೋಜಿಸಬೇಕು. ತುಮಕೂರಿನಲ್ಲಿ ಮಠವಿದೆ, ಶ್ರೀಗಳ ಗದ್ದುಗೆ ದರ್ಶನ ಹಾಗೂ ಮಠದ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆಯಬಹುದು ಎಂದು ಸ್ವತ: ಪ್ರಧಾನಿ ಮೋದಿ ಹೇಳಿದ್ದರು ಎಂದು ನರೇಂದ್ರ ಸಿಂಗ್ ತೋಮರ್ ಹೇಳಿದ್ರು.
ಈ ಯೋಜನೆಯಡಿ 6 ಕೋಟಿ ರೈತ ಕುಟುಂಬಗಳ ಖಾತೆಗೆ ₹ 12,000 ಕೋಟಿ ವರ್ಗಾವಣೆ ಪ್ರಕ್ರಿಯೆಗೆ ಮೋದಿ ಚಾಲನೆ ನೀಡಲಿದ್ದಾರೆ. 2022 ರೊಳಗೆ ದೇಶದ ರೈತರ ಆದಾಯ ದ್ವಿಗುಣಗೊಳಿಸುವ ಚಿಂತನೆಯನ್ನು ಪ್ರಧಾನಿ ಹೊಂದಿದ್ದಾರೆ. ಹೀಗಾಗಿ ಅವರು ನಿರಂತರವಾಗಿ ಕೃಷಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ತಿಳಿಸಿದರು.