ತುಮಕೂರು : ಪ್ರತಿವರ್ಷ ಕರ್ನಾಟಕ ಪಬ್ಲಿಕ್ ಶಾಲೆಗಳ ಸಂಖ್ಯೆಯನ್ನು ಹೆಚ್ಚಿಸುವ ನಿರ್ಧಾರವನ್ನು ಈಗಾಗಲೇ ಕೈಗೊಳ್ಳಲಾಗಿದೆ. ಅದರಂತೆ ಪ್ರತಿ ತಾಲೂಕಿಗೆ ಒಂದರಂತೆ ಪ್ರತಿವರ್ಷ ಮಂಜೂರು ಮಾಡಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಪ್ರತಿ ತಾಲೂಕಿಗೆ ಒಂದರಂತೆ ಪ್ರತಿವರ್ಷ ಶಾಲೆ ಮಂಜೂರು: ಸಚಿವ ಬಿ. ಸಿ. ನಾಗೇಶ್ - ಪ್ರತಿ ತಾಲೂಕಿಗೆ ಕರ್ನಾಟಕ ಪಬ್ಲಿಕ್ ಶಾಲೆಗಳ ಮಂಜೂರು
ಪ್ರತಿ ತಾಲೂಕಿಗೆ ಒಂದರಂತೆ ಪ್ರತಿವರ್ಷ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮಂಜೂರು ಮಾಡಲಾಗುತ್ತಿದೆ. ಶಾಲೆಗಳನ್ನು ಆರಂಭಿಸುವ ಸಂದರ್ಭದಲ್ಲಿ ಇಂಗ್ಲಿಷ್ ಶಿಕ್ಷಕರ ಸಂಖ್ಯೆಯನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಈ ಕುರಿತು ಗಮನ ಹರಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಬಿ ಸಿ ನಾಗೇಶ್
ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮಂಜೂರು ಕುರಿತು ಸಚಿವ ಬಿ. ಸಿ. ನಾಗೇಶ್ ಹೇಳಿಕೆ
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಸಂದರ್ಭದಲ್ಲಿ ಇಂಗ್ಲಿಷ್ ಶಿಕ್ಷಕರ ಸಂಖ್ಯೆಯನ್ನು ಗಮನಿಸಬೇಕಾಗುತ್ತದೆ. ಹೀಗಾಗಿ ಇಂಗ್ಲಿಷ್ ಶಿಕ್ಷಕರ ಸಂಖ್ಯೆಯನ್ನು ನೋಡಿಕೊಂಡು ಶಾಲೆಗಳನ್ನು ತೆರೆಯಲಾಗುತ್ತಿದೆ ಎಂದು ಹೇಳಿದರು.
ಈ ಬಾರಿ ಹೆಚ್ಚುವರಿ ಕನ್ನಡ ಪಬ್ಲಿಕ್ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸ್ವಲ್ಪ ತಡವಾಗಲಿದೆ. ಕಲ್ಯಾಣ ಕರ್ನಾಟಕ ಭಾಗದಿಂದ ಹೆಚ್ಚುವರಿ ಶಾಲೆಗಳನ್ನು ತೆರೆಯುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
Last Updated : Nov 25, 2021, 7:35 PM IST