ತುಮಕೂರು:ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ಇಂದು ಬೆಳಂ ಬೆಳಗ್ಗೆ ನಡೆದಿದೆ. ಮೃತರನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದ ಗಿರೀಶ್(37) ಹಾಗೂ ಮಾನ್ಯ(17) ಎಂದು ಗುರುತಿಸಲಾಗಿದೆ.
ತುಮಕೂರಿನಲ್ಲಿ ಕಾರು - ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಇಬ್ಬರ ಸಾವು! - ರಸ್ತೆ ಅಪಘಾತ ಇಬ್ಬರು ಸಾವು
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಕಾರು- ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ
ಇನ್ನು ಕೆಎಸ್‌ಆರ್‌ಟಿಸಿ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಗುಬ್ಬಿ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ರಾಕೇಶ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಹಿಟ್ ಅಂಡ್ ರನ್: ನೋಡು-ನೋಡುತ್ತಿದ್ದಂತೆ ವ್ಯಕ್ತಿಗೆ ಗುದ್ದಿ ಕಾರಿನ ಸಮೇತ ಪರಾರಿಯಾದ ಚಾಲಕ!