ತುಮಕೂರು :ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಹೆಣ್ಣು ಮಕ್ಕಳ ಬಗ್ಗೆ ಗೊತ್ತಿದ್ದರೆ ಯಾವಾಗಲೋ ಮದುವೆ ಆಗುತ್ತಿದ್ದರು ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ವಂಗ್ಯವಾಡಿದ್ದಾರೆ.
ಹಿಜಾಬ್ ಹೆಸರಿನಲ್ಲಿ ಹೆಣ್ಣು ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಅಡ್ಡಿಯಾಗುತ್ತಿದೆ ಎಂಬ ರಾಹುಲ್ ಗಾಂಧಿ ಟ್ವೀಟ್ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಕೇಂದ್ರ ಸಚಿವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ:ಹಿಜಾಬ್ ವಿವಾದ: ಆ ತಾಯಿ ಸರಸ್ವತಿ ಎಲ್ಲರಿಗೂ ಒಳ್ಳೆ ಬುದ್ದಿಕೊಡಲಿ.. ಅವಳು ತಾರತಮ್ಯ ಮಾಡೋದಿಲ್ಲ ಎಂದ ರಾಹುಲ್ ಗಾಂಧಿ!
ನ್ಯಾಯಾಲಯದಲ್ಲಿ ಈ ಪ್ರಕರಣ ಇರುವುದರಿಂದ ತೀರ್ಪಿಗಾಗಿ ಕಾಯುತ್ತಿದ್ದೇವೆ. ತೀರ್ಪು ಏನೇ ಬಂದರೂ ಶಿಕ್ಷಣದಲ್ಲಿ ಧರ್ಮ, ಜಾತಿ ಕಣ್ಣು ಮುಂದೆ ಬರಬಾರದು. ಆ ನಿಟ್ಟಿನಲ್ಲಿ ಸರ್ಕಾರ ತೀರ್ಮಾನ ಮಾಡುತ್ತದೆ ಎಂದರು.
ಹಿಜಾಬ್-ಕೇಸರಿ ಶಾಲು ವಿವಾದದ ಕುರಿತಂತೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಪ್ರತಿಕ್ರಿಯೆ ನೀಡಿರುವುದು.. ಹಿಜಾಬ್ನಿಂದಾಗಿ ಹೆಣ್ಣುಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳಲಾಗುತ್ತಿದೆ. ನಾವು ದೇಶದ ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಭವಿಷ್ಯವನ್ನು ಹಾಳು ಮಾಡುತ್ತಿದೇವೆ. ಆ ದೇವಿ ಸರಸ್ವತಿ ಎಲ್ಲರಿಗೂ ಒಳ್ಳೆಯ ಬುದ್ದಿ ಕೊಡಲಿ, ಆ ತಾಯಿ ಯಾರನ್ನೂ ಭೇದ-ಭಾವ ಮಾಡುವುದಿಲ್ಲ ಎಂದು ನಂಬಿದ್ದೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.