ತುಮಕೂರು :ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಧೃಢವಾಗಿದೆ.
ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಶಾಸಕರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಜೆಡಿಎಸ್ ಶಾಸಕ ಗೌರಿಶಂಕರ್ಗೆ ಕೊರೊನಾ ಪಾಸಿಟಿವ್ ಏಳು ದಿನಗಳಿಂದ ತಮ್ಮ ಸಂಪರ್ಕದಲ್ಲಿರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಂಡು, ಕ್ವಾರಂಟೈನ್ಗೆ ಒಳಗಾಗುವಂತೆ ಶಾಸಕರು ಮನವಿ ಮಾಡಿದ್ದಾರೆ.
ಇದಕ್ಕೆ ಮರು ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, 'ಸೋಂಕಿನಿಂದ ಶೀಘ್ರ ಗುಣಮುಖರಾಗಿ ಜನಸೇವೆಯಲ್ಲಿ ತೊಡಗುವಂತಾಗಲಿ ಎಂದು ಆಶಿಸುತ್ತೇನೆ' ಎಂದಿದ್ದಾರೆ.
ಅದೇ ರೀತಿ ಸಂಸದ ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ, ಗುಬ್ಬಿ ಶಾಸಕ ಶ್ರೀನಿವಾಸ್ ಗೌಡರು ಸಹ ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮೂಲಕ ಹಾರೈಸಿದ್ದಾರೆ.