ತುಮಕೂರು: ಜಿಲ್ಲೆಯ ಮಧುಗಿರಿ ಪಟ್ಟಣದ ರಾಜ ಕಾಲುವೆ ಬಳಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದೆ. ಮಗು ಕಾಲುವೆಯಲ್ಲಿ ಬಿದ್ದಿರುವುದನ್ನ ನೋಡಿದ ಸ್ಥಳೀಯರು ಮಧುಗಿರಿ ಪುರಸಭೆ ಸದಸ್ಯ ಎಂ. ಎಸ್ ಚಂದ್ರಶೇಖರ್ಗೆ ಮಾಹಿತಿ ನೀಡಿದ್ದಾರೆ. ಬಳಿಕ ಚಂದ್ರಶೇಖರ್ ದೂರವಾಣಿ ಕರೆ ಮಾಡಿ ಪೊಲೀಸರು ಮತ್ತು ಪುರಸಭೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ತುಮಕೂರು: ರಾಜಕಾಲುವೆ ಬಳಿ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆ - ಮಧುಗಿರಿ ಪಟ್ಟಣದ ರಾಜ ಕಾಲುವೆ
ಮಧುಗಿರಿ ಪಟ್ಟಣದ ರಾಜ ಕಾಲುವೆ ಬಳಿ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಪುರಸಭೆ ಅಧಿಕಾರಿಗಳು, ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜಕಾಲುವೆ ಬಳಿ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆ
ಸ್ಥಳಕ್ಕೆ ಆಗಮಿಸಿದ ಪುರಸಭೆ ಅಧಿಕಾರಿಗಳು ಹಾಗೂ ಪೊಲೀಸರು ಪರಿಶೀಲನೆ ನಡೆಸಿದ್ದು,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮಗುವಿನ ಪೂರ್ವ ಪರ ಪತ್ತೆ ಹಚ್ಚುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಗಂಡು ಮಗು ಕಳ್ಳತನಕ್ಕೆ ಯತ್ನ: ಮಹಿಳೆ ಪೊಲೀಸರ ವಶಕ್ಕೆ
Last Updated : Jun 25, 2022, 2:32 PM IST