ತುಮಕೂರು: ಅಂತರ್ ಜಿಲ್ಲಾ ಪ್ರವಾಸಕ್ಕೆ ಯಾವುದೇ ರೀತಿಯ ಪಾಸ್ಗಳ ಅವಶ್ಯಕತೆಯಿಲ್ಲ. ಹಾಗಾಗಿ ಸಾರ್ವಜನಿಕರು ಪಾಸ್ಗಾಗಿ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಅಂತರ್ ಜಿಲ್ಲಾ ಪ್ರವಾಸಕ್ಕೆ ಪಾಸ್ಗಳ ಅವಶ್ಯಕತೆ ಇಲ್ಲ: ತುಮಕೂರು ಡಿಸಿ ಸ್ಪಷ್ಟನೆ - ತುಮಕೂರು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ನ್ಯೂಸ್
ಹೊರ ರಾಜ್ಯಗಳಿಂದ 439 ಮಂದಿ ತುಮಕೂರು ಜಿಲ್ಲೆಗೆ ಆಗಮಿಸಿದ್ದು, ಅವರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ. ಜೊತೆಗೆ ಅಂತರ್ ಜಿಲ್ಲಾ ಪ್ರವಾಸಕ್ಕೆ ಯಾವುದೇ ರೀತಿಯ ಪಾಸ್ಗಳ ಅವಶ್ಯಕತೆಯಿಲ್ಲ ಎಂದು ತುಮಕೂರು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಸಂಜೆ 7 ಗಂಟೆಯಿಂದ ಬೆಳಿಗ್ಗೆ 7ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೆ ಭಾನುವಾರ ಸಂಪೂರ್ಣ ಲಾಕ್ಡೌನ್ ಇರಲಿದೆ ಎಂದು ತಿಳಿಸಿದರು. ಹೊರ ರಾಜ್ಯಗಳಿಂದ 439 ಮಂದಿ ತುಮಕೂರು ಜಿಲ್ಲೆಗೆ ಆಗಮಿಸಿದ್ದು, ಅವರೆಲ್ಲರನ್ನೂ ಕ್ವಾರಂಟೈನ್ ಮಾಡಿ, ಅವರ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಜೊತೆಗೆ ಅವರ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಕೆಲವೊಂದು ವರದಿಗಳು ನೆಗೆಟಿವ್ ಬಂದಿವೆ. ಇನ್ನಷ್ಟು ವರದಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದರು.
ಇನ್ನು ಜಿಲ್ಲೆಯಿಂದ ಹೊರ ರಾಜ್ಯಕ್ಕೆ 1,056 ಮಂದಿ ತೆರಳಿದ್ದಾರೆ. ಹೊರ ಜಿಲ್ಲೆಗಳಿಂದ ಬಂದಿರುವ ಸಾರ್ವಜನಿಕರ ಮಾಹಿತಿ ಸಿಕ್ಕರೆ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವಂತೆ ಮನವಿ ಮಾಡಿದರು.