ಯಾರೂ ನಮ್ಮ ಅಭಿಪ್ರಾಯ ಕೇಳಿಲ್ಲ: ಸಚಿವ ಮಾಧುಸ್ವಾಮಿ - ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ
ಸಿಎಂ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿಗಳ ಸಭೆಯಲ್ಲಿ ಯಾರೂ ನಮ್ಮ ಅಭಿಪ್ರಾಯ ಕೇಳಿಲ್ಲ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಯಾರೂ ನಮ್ಮ ಅಭಿಪ್ರಾಯ ಕೇಳಿಲ್ಲ; ಸಚಿವ ಮಾಧುಸ್ವಾಮಿ
ತುಮಕೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಂತಹ ವಿಚಾರದ ರಾಜಕೀಯದಲ್ಲಿ ನನಗೆ ಆಸಕ್ತಿ ಇಲ್ಲ. ಅಭಿವೃದ್ಧಿಗೆ ಸಂಬಂಧಿಸಿದಂತೆ ಬೆಳಗ್ಗೆ ಸಿಎಂ ಭೇಟಿ ಮಾಡಿದ್ದೆ, ನಮ್ಮ ಅಭಿಪ್ರಾಯವನ್ನು ಯಾರೂ ಕೇಳಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಪಕ್ಷದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿ, ಯಾವ ಪಕ್ಷದಲ್ಲೂ ಈ ರೀತಿ ಬೆಳವಣಿಗೆ ಆಗಬಾರದು. ಪಕ್ಷದಲ್ಲಿ ಕುಳಿತು ಮಾತನಾಡಬೇಕು. ಈ ರೀತಿ ಬಹಿರಂಗವಾಗಿ ಪ್ರಚಾರ ಮಾಡಿಕೊಂಡು ಹೋಗುವುದು ಸರಿಯಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ರು.
Last Updated : Jun 17, 2021, 7:55 PM IST