ಕರ್ನಾಟಕ

karnataka

ETV Bharat / city

ತುಮಕೂರಿನಲ್ಲಿ ಹೆಜ್ಜೇನು ದಾಳಿ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ - ಹೆಜ್ಜೇನಿನ ಗೂಡು

ಹೆಜ್ಜೇನು ದಾಳಿಯಿಂದಾಗಿ ಓರ್ವ ಸಾವನ್ನಪ್ಪಿ, ಮೂವರು ಆಸ್ಪತ್ರೆಗೆ ದಾಖಲಾದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯ ಎಸ್ಸಾರ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ತುಮಕೂರಿನಲ್ಲಿ ಹೆಜ್ಜೇನು ದಾಳಿ
ತುಮಕೂರಿನಲ್ಲಿ ಹೆಜ್ಜೇನು ದಾಳಿ

By

Published : May 28, 2022, 6:44 AM IST

ತುಮಕೂರು: ಹೆಜ್ಜೇನು ದಾಳಿ ಮಾಡಿದ ಪರಿಣಾಮ ಓರ್ವ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯ ಎಸ್ಸಾರ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಹುಲವಂಗಲ ಗ್ರಾಮ ಪಂಚಾಯತ್​ ನಿವೃತ್ತ ಕಾರ್ಯದರ್ಶಿ ಕೃಷ್ಣಮೂರ್ತಿ ಸ್ಥಳದಲ್ಲೇ ಮೃತಪಟ್ಟಿರುವ ವ್ಯಕ್ತಿ.

ಪುಟ್ಟಸಂದ್ರದ ರೈತ ಸೋಮಣ್ಣ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಸಂಕೇನಹಳ್ಳಿ ಗ್ರಾಮದ ಜಯಪ್ರಕಾಶ ಮತ್ತು ಶರತ್​ ಕೊರಟಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತುಮಕೂರಿನಲ್ಲಿ ಹೆಜ್ಜೇನು ದಾಳಿ

ಎಸ್ಸಾರ್ ಪೆಟ್ರೋಲ್ ಬಂಕ್​ ಸಮೀಪವಿರುವ ಆಲದಮರದಲ್ಲಿ ನಾಲ್ಕು ಹೆಜ್ಜೇನಿನ ಗೂಡುಗಳಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಹೆಜ್ಜೇನು ದಾಳಿ ನಡೆಸಿತ್ತು. ಇದೀಗ ಮತ್ತೊಮ್ಮೆ ದಾಳಿ ಮಾಡಿದ್ದು, ಸ್ಥಳಕ್ಕೆ ಕೊರಟಗೆರೆ ತಹಶೀಲ್ದಾರ್ ನಹೀದಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಿ ಗಡಿ ದಾಟಿ ಉಗ್ರರು ಪರಾರಿ

ABOUT THE AUTHOR

...view details