ತುಮಕೂರು: ಜಿಲ್ಲೆಯಲ್ಲಿ ಕೋವಿಡ್ ವಾರಿಯರ್ಸ್ ಮೇಲೆ ಕೊರೊನಾ ಕೆಂಗಣ್ಣು ಬೀರುತ್ತಲೇ ಇದೆ. ಇದೀಗ ಮತ್ತೋರ್ವ ಪೊಲೀಸ್ ಕಾನ್ಸ್ಟೇಬಲ್ ಸಾವನ್ನಪ್ಪಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕೊರೊನಾ ಸೋಂಕಿನ ವಿರುದ್ಧ ಎಷ್ಟೇ ಮುಂಜಾಗ್ರತಾ ಕ್ರಮ ವಹಿಸಿದರೂ ಈವರೆಗೆ ಮೂವರು ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ.
ಮಹಾಮಾರಿ ಕೊರೊನಾಗೆ ತುಮಕೂರು ಜಿಲ್ಲೆಯಲ್ಲಿ ಮತ್ತೋರ್ವ ಪೊಲೀಸ್ ಬಲಿ - covid news
ನಗರದಲ್ಲಿ ಕೊರೊನಾ ಮೊದಲನೇ ಅಲೆಯಲ್ಲಿ ಇಬ್ಬರು ಸಿಬ್ಬಂದಿ ಅಸುನೀಗಿದ್ದರು. ಎರಡನೇ ಅಲೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ.
ಈಗಾಗಲೇ ಕೊರೊನಾ ಮೊದಲನೇ ಅಲೆಯಲ್ಲಿ ಇಬ್ಬರು ಸಿಬ್ಬಂದಿ ಅಸುನೀಗಿದ್ದರು. ಎರಡನೇ ಅಲೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ. ಕೆ ಬಿ ಕ್ರಾಸ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಕೊರೊನಾ ಸೋಂಕು ತಗುಲಿ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಮೃತ ಪೊಲೀಸ್ ಕುಟುಂಬಕ್ಕೆ ಇಲಾಖೆ ವತಿಯಿಂದ 30 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಇನ್ನೊಂದೆಡೆ 2ನೇ ಅಲೆಯಲ್ಲಿ ಇನ್ನೂ 24 ಮಂದಿ ಪೊಲೀಸರು ಸೋಂಕಿನಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.