ತುಮಕೂರು: ಕಳೆದ ನಾಲ್ಕು ದಿನಗಳ ಹಿಂದೆ ತುಮಕೂರಿನ ಗುಬ್ಬಿ ಗೇಟ್ ಬಳಿ ಮಾರಣಾಂತಿಕ ಹಲ್ಲೆಗೊಳಗಾದ ಬಜರಂಗದಳ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಅವರನ್ನು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ನಗರದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಜು ಭಾರ್ಗವ ಅವರು ಹಲ್ಲೆ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರಮೋದ್ ಮುತಾಲಿಕ್ ಅವರಿಗೆ ಸಂಪೂರ್ಣ ಮಾಹಿತಿ ನೀಡಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಮಂಜು ಭಾರ್ಗವ ಅವರು ಹಿಂದುತ್ವದ ಬಗ್ಗೆ ನಿರಂತರ ಹೋರಾಟ ಮಾಡಿದರು. ಸಂಘಟನೆಯ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರ ಮೇಲಿನ ಹಲ್ಲೆ ಖಂಡನೀಯ. ಅಕ್ರಮ ಕಸಾಯಿ ಖಾನೆ ವಿರುದ್ಧ ಹೋರಾಟ ಮಾಡುತ್ತಿದ್ದ ಮಂಜು ಭಾರ್ಗವ ಅವರ ಮೇಲೆ ಗೋಹಂತಕರು ಹಾಗೂ ಹಿಂದೂ ವಿರೋಧಿಗಳು ವ್ಯವಸ್ಥಿತವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು.