ತುಮಕೂರು:ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪರ್ಯಾಯ ಸಾರಿಗೆ ವ್ಯವಸ್ಥೆ ಕಲ್ಪಿಸುವ ಸಂಬಂಧ ಎಸ್ಪಿ ಕಚೇರಿಯಲ್ಲಿ ಖಾಸಗಿ ಬಸ್ ಮತ್ತು ಮ್ಯಾಕ್ಸಿ ಕ್ಯಾಬ್ ಮಾಲೀಕರೊಂದಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಸಹಕಾರ ನೀಡಬೇಕು. ಅಧಿಕ ಬಾಡಿಗೆ ದರ ವಸೂಲಿ ಮಾಡಬಾರದು. ವಯೋವೃದ್ಧರು ಹಾಗೂ ಶಾಲಾ - ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಸಹಕಾರಿಯಾಗುವಂತೆ ತಿಳಿಸಿದರು.