ತುಮಕೂರು/ರಾಮನಗರ:ಉತ್ತರ ಪ್ರದೇಶದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ಪ್ರಿಯಾಂಕಾ ಗಾಂಧಿ ಹೋಗಿದ್ದರು. ಅದಕ್ಕೂ ಕೂಡ ಅಲ್ಲಿನ ಬಿಜೆಪಿ ಸರ್ಕಾರ ಅವಕಾಶ ನೀಡಿಲ್ಲ. ಅಲ್ಲದೇ ಪ್ರಿಯಾಂಕಾ ಗಾಂಧಿ ಬಂಧನ ಕಾನೂನು ಬಾಹಿರ. ಬಂಧಿಸಿದ 24 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ಅದನ್ನು ಕೂಡ ಉತ್ತರ ಪ್ರದೇಶ ಸರ್ಕಾರ ಮಾಡಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಕುರಿತು ಎಐಸಿಸಿ ಕಾನೂನು ಘಟಕ ಇದನ್ನು ಯಾವ ರೀತಿ ತೆಗೆದುಕೊಳ್ಳಬೇಕು ಎಂದು ಪರಿಶೀಲಿಸುತ್ತಿದೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ಪ್ರಿಯಾಂಕಾ ಗಾಂಧಿ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಬಹುದು. ಅಲ್ಲಿ ಏನು ಬೇಕಾದರೂ ಸರ್ಕಾರ ಹೇಳಬಹುದಾಗಿದೆ. ಆದರೆ ಅದನ್ನು ನ್ಯಾಯಾಲಯ ಯಾವ ರೀತಿ ಪರಿಗಣಿಸಲಿದೆ ಎಂಬುದು ಮುಂದಿನ ಹೆಜ್ಜೆಯಾಗಿ ಇರುತ್ತದೆ ಎಂದರು.
ವಿರೋಧ ಪಕ್ಷಗಳ ಅಗತ್ಯವಿಲ್ಲ:
ಭಾರತೀಯ ಜನತಾ ಪಕ್ಷಕ್ಕೆ ವಿರೋಧ ಪಕ್ಷಗಳ ಅಗತ್ಯವಿಲ್ಲ. ಅವರು ಮಾಡಿದ್ದನ್ನು ಪ್ರಶ್ನೆ ಮಾಡಬಾರದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳು ಇರಲು ಸಂವಿಧಾನದಲ್ಲಿ ಅವಕಾಶವಿದೆ. ಪ್ರತಿಭಟನೆ ಮಾಡಲು ಹಕ್ಕಿದೆ. ಯಾವುದೇ ತಪ್ಪು ಆಗಿದ್ದರೆ ಅದನ್ನು ಪ್ರಶ್ನಿಸುವ ಹಕ್ಕು ಸಂವಿಧಾನದಲ್ಲಿ ನೀಡಲಾಗಿದೆ. ಬಿಜೆಪಿಗೆ ಇದರಲ್ಲಿ ನಂಬಿಕೆ ಇಲ್ಲ ಎಂದರು.
ಪ್ರಿಯಾಂಕಾ ಗಾಂಧಿ ಅವರನ್ನು ಹತ್ತಿಕ್ಕುವ ಪ್ರಯತ್ನ:
ಭಾರತೀಯ ಜನತಾ ಪಕ್ಷದ ರೈಲು ಕೆಳಗೆ ಹೋಗುತ್ತಿದೆ. ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಂತಹ ಯಾವುದೇ ಸೂಚನೆಗಳಿಲ್ಲ. ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ಅವರು ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರನ್ನು ಹತ್ತಿಕ್ಕುವ ಪ್ರಯತ್ನ ಬಿಜೆಪಿಯಿಂದ ನಡೆಯುತ್ತಿದೆ ಎಂದು ಆರೋಪಿಸಿದರು
ಕೇಂದ್ರದ ವಿರುದ್ಧ ಎಂಎಲ್ಸಿ ಸಿ.ಎಂ.ಲಿಂಗಪ್ಪ ಕಿಡಿ: