ತುಮಕೂರು:ಪುನೀತ್ ರಾಜ್ಕುಮಾರ್ ನಿಧನದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಜಿಲ್ಲೆಯಲ್ಲಿ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾನೆ. ತುಮಕೂರು ತಾಲೂಕಿನ ಅರೆಗುಜ್ಜನಹಳ್ಳಿಯ ರವಿ ಕುಮಾರ್ (27) ಮೃತ ಅಭಿಮಾನಿ.
ಈತ ಪುನೀತ್ ರಾಜ್ಕುಮಾರ್ ನಿಧನದ ನಂತರ ಬೆಂಗಳೂರಿಗೆ ತೆರಳಿ ಅಂತಿಮ ದರ್ಶನ ಪಡೆದು ವಾಪಸ್ ಗ್ರಾಮಕ್ಕೆ ಆಗಮಿಸಿದ್ದ. ಬಳಿಕ ಸರಿಯಾಗಿ ಊಟ, ತಿಂಡಿ ಸೇವಿಸದೇ ಮಾನಸಿಕ ಖಿನ್ನತೆಗೆ ಒಳಗಾಗಿ ನರಳುತ್ತಿದ್ದನಂತೆ.
ಹೀಗಾಗಿ ಚಿಕಿತ್ಸೆಗಾಗಿ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರ ಜಿಲ್ಲೆಯಲ್ಲೂ ಇಂತಹದ್ದೇ ದುರಂತ ನಡೆದಿದೆ. ಅಪ್ಪು ಸಾವಿನ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿ ಒಂದು ವಾರದಿಂದ ಆಹಾರ ತ್ಯಜಿಸಿದ್ದ ಅಭಿಮಾನಿ ಇಂದು ಮೃತಪಟ್ಟಿದ್ದಾನೆ.
ಇದನ್ನೂ ಓದಿ:ತುಮಕೂರಿನಲ್ಲಿ ಮತ್ತೋರ್ವ ಪುನೀತ್ ರಾಜ್ಕುಮಾರ್ ಅಭಿಮಾನಿ ಹೃದಯಾಘಾತದಿಂದ ಸಾವು!