ಕರ್ನಾಟಕ

karnataka

ETV Bharat / city

ನಾಳೆ ಸಿದ್ದಗಂಗಾ ಮಠಕ್ಕೆ ರಾಹುಲ್‍ಗಾಂಧಿ ಭೇಟಿ: ಡಾ.ಜಿ.ಪರಮೇಶ್ವರ್ - Rahul Gandhi visits Siddaganga mutt

ನಡೆದಾಡುವ ದೇವರು ಎಂದು ಭಕ್ತರಿಂದ ಕರೆಯಿಸಿಕೊಳ್ಳುತ್ತಿದ್ದ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ 115 ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ನಿಮಿತ್ತ ಮಾರ್ಚ್ 31 ರಂದು ಸಂಜೆ ಸಂಸದ ರಾಹುಲ್‍ಗಾಂಧಿ ಅವರು ತುಮಕೂರಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಡಾ.ಜಿ.ಪರಮೇಶ್ವರ್
ಡಾ.ಜಿ.ಪರಮೇಶ್ವರ್

By

Published : Mar 30, 2022, 9:47 AM IST

ತುಮಕೂರು: ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಮಾ.31 ರಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಗೌರವ ಸಮರ್ಪಣೆ ಮಾಡಲಿದ್ದಾರೆ. ಈ ಹಿಂದೆ ಶಿವಕುಮಾರ ಸ್ವಾಮೀಜಿ ಇದ್ದಾಗ ಸೋನಿಯಾ ಗಾಂಧಿ ಕೂಡ ಭೇಟಿ ನೀಡಿದ್ದರು ಎಂದು ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಮಠದಲ್ಲಿ ಶ್ರೀಗಳ ಗದ್ದುಗೆಗೆ ಗೌರವ ಸಮರ್ಪಣೆ ಮಾಡಿ, ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿ ಮಾಡಲಿದ್ದಾರೆ. ಮಾ.31ರಂದು ಸಂಜೆ 4 ರಿಂದ 5 ಗಂಟೆವರೆಗೆ ಮಠದಲ್ಲಿ ಕಾರ್ಯಕ್ರಮ ಇರುತ್ತದೆ. ರಾಹುಲ್ ಗಾಂಧಿ, ಮಠದ ಬಗ್ಗೆ ಗೌರವ ಭಾವನೆ ಇರಿಸಿಕೊಂಡಿದ್ದಾರೆ ಎಂದರು.

ಶಾಸಕ ಡಾ.ಜಿ.ಪರಮೇಶ್ವರ್ ಪತ್ರಿಕಾಗೋಷ್ಠಿ

ಇದೊಂದು ರಾಜಕೀಯೇತರ ಭೇಟಿಯಾಗಿದ್ದು, ಅವರ ತಾಯಿಯವರಾದ ಶ್ರೀಮತಿ ಸೋನಿಯಾಗಾಂಧಿ ಸಹ ಈ ಹಿಂದೆ ಹಿರಿಯ ಶ್ರೀಗಳ ಸಮ್ಮುಖದಲ್ಲಿಯೇ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರ ಹಾದಿಯಲ್ಲಿಯೇ ಅವರ ಮಗನೂ ಸಹ ಶ್ರೀಗಳ ಆಶೀರ್ವಾದ ಪಡೆಯಲು ಬರುತ್ತಿದ್ದಾರೆ. ಇದು ರಾಜಕೀಯ ಹೊರತಾದ ಭೇಟಿ ಎಂದು ಹೇಳಿದರು.

ನಡೆದಾಡುವ ದೇವರು ಎಂದೇ ಖ್ಯಾತಿಗಳಿಸಿರುವ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜನ್ಮ ದಿನಾಚರಣೆ ಮಾರ್ಚ್ 31 ರಂದು ನಡೆಯುತ್ತಿದೆ. ಕಾಂಗ್ರೆಸ್ ಮುಖಂಡರೆಲ್ಲರೂ ಸ್ವಾಮೀಜಿ ಅವರಿಗೆ ಗೌರವ ಸಮರ್ಪಣೆ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ:9 ದಿನದಲ್ಲಿ 8ನೇ ಬಾರಿಗೆ ಪೆಟ್ರೋಲ್​​​- ಡೀಸೆಲ್​ ಬೆಲೆ ಏರಿಕೆ.. 150ಕ್ಕೆ ತಲುಪುತ್ತಾ ತೈಲ ದರ?

ABOUT THE AUTHOR

...view details